*ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕ ಕೊಡುಗೆಗಳೇನು?*

ಪ್ರಗತಿವಾಹಿನಿ ಸುದ್ದಿ: ʻʻಧರೆಯ ಕೃಷಿ ಶುದ್ಧವಾಗಿಯಲ್ಲದೆ, ಸಸಿ ಶುದ್ಧವಿಲ್ಲʼʼ-ವಚನಕಾರ ಶಿವಲೆಂಕ ಮಂಚಣ್ಣ ಅವರ ವಚನವನ್ನು ಪ್ರಸ್ತಾಪಿಸಿ ಕೃಷಿ ಇಲಾಖೆಗೆ ಹಲವು ಕೊಡುಗೆಗಳನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ʻರೈತ ಸಮೃದ್ಧನಾದರೆ ಕರ್ನಾಟಕ ಸಮೃದ್ಧವಾಗುತ್ತದೆʼ ಎಂಬ ದೃಢ ನಂಬಿಕೆಯಿಂದ ಪ್ರೇರಿತವಾಗಿ ನಮ್ಮ ಸರ್ಕಾರವು ಬಿತ್ತನೆಯಿಂದ ಮಾರಾಟದವರೆಗೆ ರೈತರಿಗೆ ಸಮಗ್ರ ಬೆಂಬಲ ನೀಡುವ ನಾಲ್ಕು ಆಧಾರಸ್ತಂಭಗಳ ಮೇಲೆ ಕೃಷಿ ಅಭಿವೃದ್ಧಿ ತಂತ್ರವನ್ನು ರೂಪಿಸಿದೆ. ಮೊದಲನೆಯ ಆಧಾರಸ್ತಂಭ ರೈತರಿಗೆ ವೈಜ್ಞಾನಿಕ ಕೃಷಿ ಮಾರ್ಗದರ್ಶನ, ಎರಡನೆಯದು ರೈತರಿಗೆ ಹಣಕಾಸು ನೆರವು, ಮೂರನೆಯದು ಉತ್ತಮ ಗುಣಮಟ್ಟದ … Continue reading *ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕ ಕೊಡುಗೆಗಳೇನು?*