Politics

*ಸಿಎಂ ಸಿದ್ದರಾಮಯ್ಯಗೆ ಬಜೆಟ್ ಪ್ರತಿ ಹಸ್ತಾಂತರ: ಆಯವ್ಯಯ ಮಂಡನೆಗೆ ಕ್ಷಣಗಣನೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

ವಿಧಾನಸಭೆಯಲ್ಲಿ ಬೆಳಿಗ್ಗೆ 10:15ಕ್ಕೆ ಸಿಎಂ ಸಿದ್ದರಾಮಯ್ಯ ಪ್ರಸ್ತಕ್ತ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು, ಅದಕ್ಕೂ ಮುನ್ನ ಸಿಎಂ ಕಾವೇರಿ ನಿವಾಸದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳು ಬಸವರಾಜ್ ರಾಯರೆಡ್ದಿ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಜೆಟ್ ಪ್ರತಿ ಹಸ್ತಾಂತರಿಸಿ ಶುಭಕೋರಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ ಬಜೆಟ್ ಪ್ರತಿ ಪ್ರದರ್ಶಿಸಿದರು. ಕೆಲವೇ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮಿಸಲಿದ್ದು, ಬಜೆಟ್ ಮಂಡನೆ ಮಾಡಲಿದ್ದಾರೆ.

Home add -Advt

Related Articles

Back to top button