Cancer Hospital 2
Beereshwara 36
LaxmiTai 5

*ಇ-ಆಡಳಿತ: ಮಹತ್ವದ ಯೋಜನೆ ಪ್ರಾಯೋಗಿಕ ಜಾರಿಗೆ 6 ತಾಲೂಕುಗಳ ಆಯ್ಕೆ*

Anvekar 3

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇ-ಆಡಳಿತ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಗಳಾದ FRUITS, Kutumba, GIS ಗಳನ್ನು ಬಳಸಿಕೊಂಡು ತಾಲ್ಲೂಕು ಹಂತದ ಕಛೇರಿಗಳಲ್ಲಿನ ಶಾಸನಬದ್ಧ ಕಾಲಮಿತಿ ಇರುವಂತಹ ಸೇವೆಗಳನ್ನು ಹೊರತುಪಡಿಸಿ, ಉಳಿದ ಸೇವೆಗಳನ್ನು ತತ್‌ಕ್ಷಣವೇ ಅಥವಾ ಅದೇ ದಿನದಂದು ಅಥವಾ ಅತ್ಯಂತ ಸಂಕೀರ್ಣ ಪ್ರಕರಣಗಳಲ್ಲಿ ಒಂದು ವಾರದೊಳಗೆ ಸಾರ್ವಜನಿಕರಿಗೆ ಒದಗಿಸಲು ಯತ್ನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಜೆಟ್ ಮಂಡನೆ ವೇಳೆ ಮಾತನಾಡಿದ ಸಿಎಂ, ಪ್ರಾಯೋಗಿಕವಾಗಿ ಒಂಭತ್ತು ಕೋಟಿ ರೂ.ಗಳ ವೆಚ್ಚದಲ್ಲಿ ಈ ವಿಧಾನವನ್ನು ಜಾರಿಗೆ ತರಲು ಚಿಕ್ಕಬಳ್ಳಾಪುರ, ಕೊರಟಗೆರೆ, ಚಾಮರಾಜನಗರ, ರಾಯಚೂರು, ಧಾರವಾಡ ಮತ್ತು ಬಂಟ್ವಾಳ ತಾಲ್ಲೂಕುಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.

ಸಕಾಲದಡಿ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳು ಸಂಪರ್ಕಿತ ಡೇಟಾಬೇಸ್‌ (Connected database) ವಿಧಾನ ಬಳಸಿ ಕಡಿಮೆ ಅವಧಿಯಲ್ಲಿ ಸೇವೆಗಳನ್ನು ನೀಡಲು ಬ್ಯಾಕ್‌ ಎಂಡ್‌ ಪ್ರಕ್ರಿಯೆಗಳಲ್ಲಿ (backend processes) ಪಾರದರ್ಶಕತೆ ತರಲಾಗುವುದು. 100 ಪ್ರಮುಖ ಸೇವಾಸಿಂಧು ಸೇವೆಗಳನ್ನು ಸಕಾಲ ವಿನ್ಯಾಸಕ್ಕೆ ಅನುಗುಣವಾಗಿ ಪರಿವರ್ತಿಸಲು Business Process Re-engineering ಕೋಶವನ್ನು ಸ್ಥಾಪಿಸಲಾಗುವುದು. ಇದರಲ್ಲಿ ಪ್ರಮುಖವಾಗಿ ಆದಾಯ ಪ್ರಮಾಣ ಪತ್ರಕ್ಕಾಗಿ ಕುಟುಂಬ ಆದಾಯವನ್ನು ವಸ್ತುನಿಷ್ಠ ನಿರ್ಣಯ ರೂಪದಲ್ಲಿ ಪರಿವರ್ತಿಸಲಾಗುವುದು. ಈ ಯೋಜನೆಗಾಗಿ ಮೂರು ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ವಿವರಿಸಿದರು.

Emergency Service

ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಕೆ-ಜಿ.ಐ.ಎಸ್. (KGIS) ತಂತ್ರಜ್ಞಾನವನ್ನು ಆಧರಿಸಿ ವೈಜ್ಞಾನಿಕ ಮತ್ತು ತರ್ಕಬದ್ದ ಮಾರ್ಗಸೂಚಿ ದರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು. ಎಲ್ಲಾ ರಸ್ತೆಗಳು ಮತ್ತು ಬೀದಿಗಳಿಗೆ ಹೊಂದಿಕೊಂಡಿರುವ ಆಸ್ತಿಗಳ ಮಾರ್ಗಸೂಚಿ ಮೌಲ್ಯವನ್ನು ಹಾಗೂ ಅದರ ನಿಖರ ಮುದ್ರಾಂಕ ಶುಲ್ಕವನ್ನು ಆನ್‌ಲೈನ್‌ ನಲ್ಲಿ ಪಡೆಯಲು ಅನುಕೂಲವಾಗಲಿದೆ. ಪ್ರಾಯೋಗಿಕವಾಗಿ ಈ ಯೋಜನೆಯನ್ನು ಒಂದು ಜಿಲ್ಲೆಯಲ್ಲಿ ಪ್ರಾರಂಭಿಸಲಾಗುವುದು ಮತ್ತು ಹಂತ ಹಂತವಾಗಿ ರಾಜ್ಯದೆಲ್ಲೆಡೆ ಜಾರಿಗೊಳಿಸಲಾಗುವುದು.

ಸರ್ಕಾರದ ವಿವಿಧ ಕಾರ್ಯಕ್ರಮ/ಯೋಜನೆಗಳ ಅನುಷ್ಠಾನಕ್ಕಾಗಿ ಇಲಾಖೆಗಳ ಮಧ್ಯೆ ಸಮನ್ವಯತೆ ಸಾಧಿಸಿ ಜಂಟಿ ನಿರ್ಧಾರ ಕೈಗೊಂಡು ಅನುಮೋದನೆ ನೀಡಲು ಅನುವಾಗುವಂತೆ ಜಿಐಎಸ್‌ (GIS) ಆಧಾರಿತ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು.

ರಾಜ್ಯ ವಿಧಾನ ಮಂಡಲದ ಕಲಾಪಗಳನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಹಾಗೂ ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಕಲಾಪದ ಮಾಹಿತಿ ಸುಲಭವಾಗಿ ಲಭ್ಯವಾಗಿಸುವ ನಿಟ್ಟಿನಲ್ಲಿ ವಿಧಾನ ಮಂಡಲದ ಚಟುವಟಿಕೆಗಳ ಡಿಜಿಟಲೀಕರಣದ ಯೋಜನೆಯನ್ನು ಹೊಸದಾಗಿ ರೂಪಿಸಿ ಅನುಷ್ಠಾನಗೊಳಿಸಲಾಗುವುದು.

Bottom Add3
Bottom Ad 2