Latest

ಸಿಎಂ ಯಡಿಯೂರಪ್ಪ, ಸಚಿವ ಸುಧಾಕರ್ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಚಾಮರಾಜನಗರ ದುರಂತಕ್ಕೆ ರಾಜ್ಯ ಸರ್ಕಾರ, ಜಿಲ್ಲಾಸ್ಪತ್ರೆ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ. ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರದಲ್ಲಿ 24 ರೋಗಿಗಳು ಸಾವನ್ನಪ್ಪಿರುವ ಘಟನೆ ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಿಜೆಪಿ ನಾಯಕರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು ಎಂದು ಕಿಡಿಕಾರಿದ್ದಾರೆ.

Home add -Advt

ಪ್ರಕರಣದ ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಸುಧಾಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಚಾಮರಾಜನಗರ ದುರಂತ ಪ್ರಕರಣ; ವರದಿ ನೀಡುವಂತೆ ಗೃಹ ಸಚಿವರ ಸೂಚನೆ

Related Articles

Back to top button