*ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ ಶಿವರಾಜ್ ಕುಮಾರ್: ಕರೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ನಟ ಶಿವರಾಜ್ ಕುಮಾರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಅಮೆರಿಕಾದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಅವರಿಗೆ ಶಸ್ರಚಿಕಿತ್ಸೆ ನಡೆಯಲಿದೆ. ಈ ಹಿನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿವರಾಜ್ ಕುಮಾರ್ ಅವರಿಗೆ ಕರೆ ಮಾಡಿ ಮಾತನಾಡಿದ್ದು, ಬೇಗನೇ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ.
ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ.
ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ.
ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು ಅವರನ್ನು ಕಾಪಾಡಲಿದೆ ಎಂದು ಆಶಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ