ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನದಿ ನೀರು ಪ್ರಾಧಿಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸರ್ವಪಕ್ಷಗಳ ತುರ್ತು ಸಭೆ ಕರೆದಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಮಧ್ಯಾಹ್ನ 12;30ಕ್ಕೆ ವಿಶೇಷ ತುರ್ತು ಸಭೆ ನಡೆಯಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಕಾವೇರಿ ಜಲಾನಯನ ವ್ಯಾಪ್ತಿಯ ಸಚಿವರು, ಸಚಿವ ಸಂಪುಟದ ಸಚಿವರು, ಲೋಕಸಭೆ ಹಾಗೂ ರಾಜ್ಯ ಸಭಾ ಸದಸ್ಯರು, ವಿಪಕ್ಷ ನಾಯಕರು ಭಾಗಿಯಾಗಲಿದ್ದಾರೆ.
ಕಾವೇರಿ ನದಿ ನೀರು ವಿಚಾರವಾಗಿ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಕರೆದಿರುವ ತುರ್ತು ಸಭೆಗೆ ಹಾಜರಾಗದಿರಲು ಮಾಜಿ ಸಿಎಂ ಬೊಮ್ಮಾಯಿ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಭೆಗೆ ನನಗೂ ಆಹ್ವಾನವಿತ್ತು. ಆದರೆ ದೆಹಲಿಗೆ ಹೋಗುತ್ತಿರುವುದರಿಂದ ಇಂದಿನ ಸಭೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ