LatestUncategorized

*ನಕಲಿ ಪತ್ರ: ಸಿದ್ದರಾಮಯ್ಯ ಸ್ಪಷ್ಟೀಕರಣ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ತಮ್ಮ ಹೆಸರಿನಲ್ಲಿ ನಕಲಿ ಪತ್ರ ರವಾನಿಸಿರುವ ಬಗ್ಗೆ ಸ್ಪಷ್ಟನೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಕುತಂತ್ರಿಗಳ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನನ್ನ ಹೆಸರಿನಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಿಡಿಗೇಡಿಗಳು ನಕಲಿ ಪತ್ರ ಕಳುಹಿಸಿದ್ದಾರೆ. ಇದು ಕುತಂತ್ರಿಗಳ ಕೃತ್ಯ. ನನ್ನ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯಗಳನ್ನು ಉಂಟು ಮಾಡಲು, ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯವಿದೆ ಎಂದು ಹೇಳಲು ಇಂತಹ ನಕಲಿ ಪತ್ರ ಸೃಷ್ಟಿ ಮಾಡಿದ್ದಾರೆ. ಇದು ನಕಲಿ ಪತ್ರ, ನಾನು ಬರೆದ ಪತ್ರ ಅಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಇದನ್ನು ಆರ್.ಎಸ್.ಎಸ್ ಕುತಂತ್ರಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿಯ ಬಿಟ್ಟಿದ್ದಾರೆ. ಈ ಪತ್ರವನ್ನು ಜನರು ತಿರಸ್ಕರಿಸಬೇಕು. ಈ ಬಗ್ಗೆ ಚುನಾವಣಾ ಆಯೋಗಕ್ಕೂ ದೂರು ನೀಡುತ್ತೇನೆ. ಪೊಲೀಸರಿಗೂ ದೂರು ನೀಡುತ್ತೇನೆ. ಈ ನಕಲಿ ಪತ್ರದ ಹಿಂದೆ ಇರುವವರು ಯಾರು ಎಂಬುದನ್ನು ಬಯಲಿಗೆಳೆಯಬೇಕು ಹಾಗೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುವುದಾಗಿ ತಿಳಿಸಿದರು.

https://pragati.taskdun.com/fake-lattersiddaramaiahreaction/


Home add -Advt

Related Articles

Back to top button