Kannada NewsKarnataka NewsLatestPolitics

*ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಜಾಬ್ ನಿಷೇಧ ಆದೇಶ ಇನ್ನೂ ವಾಪಾಸ್ ಪಡೆದಿಲ್ಲ. ಆದೇಶ ಹಿಂಪಡೆಯುವ ಬಗ್ಗೆ ಆಲೋಚನೆ ಇದೆ ಎಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.

ನಿನ್ನೆ ಯಾರೋ ಒಬ್ಬರು ಕೇಳಿದರು. ಹಾಗಾಗಿ ಆ ಉತ್ತರ ಕೊಟ್ಟಿದ್ದೇನೆ. ಹಿಜಾಬ್ ನಿಷೇಧ ಆದೇಶ ವಾಪಾಸ್ ಗೆ ಯೋಚನೆ ಮಾಡಿದ್ದೇವೆ. ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.


Related Articles

Back to top button