LatestUncategorized

*ಗಾಬರಿಪಡುವಂತದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ; ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಡೋರ್ ಬಳಿ ನಿಂತು ಜನರತ್ತ ಕೈ ಬೀಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ ಎಂಬ ಸುದ್ದಿಯಾಗಿತ್ತು. ಈ ಬಗ್ಗೆ ಸ್ವತ: ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು ಗಾಬರಿಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಗಾಬರಿಪಡುವಂತದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ. ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ. ಈಗ ಆರಾಮವಾಗಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನು ಅತಿರಂಜಿತ ರೀತಿಯಲ್ಲಿ ವರದಿಮಾಡಿ ಜನರನ್ನು ಗಾಬರಿ ಮಾಡಬೇಡಿ ಎಂದು ಸಿದ್ದರಾಮಯ್ಯ ವಿನಂತಿಸಿದ್ದಾರೆ.

ವಿಜಯನಗರ ಜಿಲ್ಲೆಯ ಕುಡಚಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿರುವ ಸಿದ್ದರಾಮಯ್ಯ ಬೆಳಿಗ್ಗೆ ಕಾರಿನ ಸೈಡ್ ಸ್ಟೆಪ್ ನಲ್ಲಿ ನಿಂತು ಜನರತ್ತ ಕೈಬೀಸುತ್ತಿದ್ದ ವೇಳೆ ಇದ್ದಕ್ಕಿಂದಂತೆ ಕುಸಿದು ಬೀಳುವಂತಾಗಿದ್ದರು. ತಕ್ಷಣ ಸ್ಥಳದಲ್ಲಿದ್ದ ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯನವರನ್ನು ಹಿಡಿದುಕೊಂಡಿದ್ದರಿಂದ ಸಾವರಿಸಿಕೊಂಡು ಕಾರಿನಲ್ಲಿ ಕುಳಿತು ವಿಶ್ರಾಂತಿ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಯಾವುದೇ ತೊಂದರೆಯಾಗಿಲ್ಲ, ಆರಮವಾಗಿರುವುದಾಗಿ ತಿಳಿಸಿದ್ದಾರೆ.

Home add -Advt


https://pragati.taskdun.com/siddaramaiahcollapsevijayanagarakudlagi/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button