Politics

*ನಾನು ರಾಜೀನಾಮೆ ಕೊಡಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ*

ಗೋದ್ರಾ ಘಟನೆಯಾದಾಗ ಮೋದಿ ರಾಜೀನಾಮೆ ಕೊಟ್ಟಿದ್ರಾ?

ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷ ಬಿಜೆಪಿ ನಾಯಕರ ಪ್ರತಿಭಟನೆ ವಿಚಾರವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನಾನು ರಾಜೀನಾಮೆ ಕೊಡುವುದಿಲ್ಲ ಎಂದು ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯ ಅನೇಕ ನಾಯಕರ ವಿರುದ್ಧ ಕೇಸ್ ದಾಖಲಾಗಿದೆ. ಅವರು ರಾಜೀನಾಮೆ ಕೊಟ್ಟಿದ್ದಾರಾ? ನಾನು ಏನೂ ತಪ್ಪು ಮಾಡಿಲ್ಲ. ಹಾಗಾಗಿ ರಾಜಿನಾಮೆ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಗುಜರಾತ್ ನ ಗೋದ್ರಾ ಘಟನೆ ನಡೆದ ಸಂದರ್ಭದಲ್ಲಿ ನರೇಂದ್ರ ಮೋದಿ ರಾಜೀನಾಮೆ ಕೊಟ್ಟಿದ್ದರಾ? ನಾನು ತಪ್ಪು ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡುವುದೂ ಇಲ್ಲ ಎಂದು ಹೇಳಿದರು.

Related Articles

Back to top button