ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ.
ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಸಿ.ವೇಣುಗೋಪಾಲ್, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಜೊತೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಚರ್ಚೆ ನಡೆಸಿ ಅಂತಿಮವಾಗಿ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಹಾಗು ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದರು.
ಮೇ 20ರಂದು ಮಧ್ಯಾಹ್ನ 12:30ಕ್ಕೆ ಸಿಎಂ ಹಾಗೂ ಡಿಸಿಎಂ ಇಬ್ಬರೂ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವೇಳೆ ಕೆಲ ಶಾಸಕರು ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕರ್ನಾಟಕ್ಕೆ ಒಬ್ಬರು ಮಾತ್ರ ಉಪಮುಖ್ಯಮಂತ್ರಿಯಿರುತ್ತಾರೆ. ಇನ್ನು ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ ಹುದ್ದೆಯ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರೆಯುತ್ತಾರೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ