ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಅನಾರೋಗ್ಯ ಹಿನ್ನಲೆಯಲ್ಲಿ ಆ.4ರಂದು ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ ಅವರಿಗೆ ಕೊವಿಡ್ ಟೆಸ್ಟ್ ಮಾಡಿಸಿದಾಗ ಕೊರೊನಾ ಸೋಂಕು ಇರುವುದು ದೃಢ ಪಟ್ಟಿತ್ತು. ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು. ಸೂಕ್ತ ಚಿಕಿತ್ಸೆ ಬಳಿಕ ಇದೀಗ ಸಿದ್ದರಾಮಯ್ಯ ಅವರ ಕೊವಿಡ್ ಟೆಸ್ಟ್ ನಲ್ಲಿ ನೆಗೆಟೀವ್ ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ ಮರಳಿದ್ದೇನೆ. ಕಳೆದ 10 ದಿನಗಳಲ್ಲಿ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು. ವೈದ್ಯರ ಸಲಹೆಯಂತೆ ಒಂದು ವಾರ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದೇನೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ