*ನಾಳೆ ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್: ಕುತೂಹಲ ಮೂಡಿಸಿದ ಸಭೆ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿ ಪ್ರವಾಸ ಮುಂದೂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಾಳೆ ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ನಾಳೆ ಬೆಳಿಗ್ಗೆ 9:30ಕ್ಕೆ ಸಿಎಂ ಕಾವೇರಿ ನಿವಾಸಕ್ಕೆ ಭೇಟಿ ನೀಡಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಲಿದ್ದು, ನಾಳೆನ ಸಿಎಂ ಭೇಟಿ ತೀವ್ರ ಮಹತ್ವ ಪಡೆದುಕೊಂಡಿದೆ.
ಇಂದು ಸಂಜೆ 7:45ಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಲು ಫ್ಲೈಟ್ ಬುಕ್ ಮಾಡಿದ್ದರು. ಆದರೆ ಕೊನೆ ಕ್ಷಣದಲ್ಲಿ ದೆಹಲಿ ಪ್ರವಾಸ ಮುಂದೂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ನಾಳೆ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದಾರೆ.
ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಪೈಪೋಟಿ ಹೆಚ್ಚುತ್ತಿರುವ ನಡುವೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಾಳಿನ ಚರ್ಚೆ ತೀವ್ರ ಕುತೂಹಲ ಮೂಡಿಸಿದೆ.


