Latest

*ಒಗ್ಗಟ್ಟು ಪ್ರದರ್ಶಿಸಿದ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್; ಜೊತೆಯಾಗಿ ತೆರಳಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಧ್ಯೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಬ್ಬರೂ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಚುನಾವಣೆಗೆ ಒಂದು ದಿನ ಬಾಕಿಯಿರುವಾಗ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಪಕ್ಷ ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಪ್ರಮಾಣ ಮಾಡಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಬರೆದಿದ್ದಾರೆ ಎನ್ನಲಾದ ನಕಲಿ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರಿಬ್ಬರೂ ಒಟ್ಟಾಗಿ ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿದ್ದು, ಈ ಮೂಲಕ ರಾಜ್ಯದ ಜನತೆಗೆ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ.

https://pragati.taskdun.com/vidhanasabha-electionbelagavielection-commission/


Home add -Advt

Related Articles

Back to top button