Politics

*ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್; ಚೀಫ್ ಎಂಜಿನಿಯರ್ ಗೆ ಖಡಕ್ ಎಚ್ಚರಿಕೆ*

ನಾನಾ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾಗುವ ಪ್ರದೇಶಗಳಿಗೆ ಭೇಟಿ

ಪ್ರಗತಿವಾಹಿನಿ ಸುದ್ದಿ: ಮಳೆ ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಬಿಬಿಎಂಪಿ ಕಡೆಯಿಂದ ತೆಗೆದುಕೊಂಡಿರುವ ಮುಂಜಾಗ್ರತ ಕ್ರಮಗಳನ್ನು ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಜಂಟಿಯಾಗಿ ಬುಧವಾರ ನಗರ ಪ್ರದಕ್ಷಿಣೆ ಮಾಡಿದರು. ಮೈಸೂರು ರಸ್ತೆಯ ದೀಪಾಂಜಲಿನಗರ, ಗಾಳಿ ಆಂಜನೇಯಸ್ವಾಮಿ ದೇವಸ್ಥಾನ, ನಾಯಂಡಹಳ್ಳಿ ಜಂಕ್ಷನ್ ಮತ್ತಿತರ ಕಡೆ ರಾಜಕಾಲುವೆ ವೀಕ್ಷಣೆ ಮಾಡಿದರು.

ಸಚಿವರಾದ ರಾಮಲಿಂಗಾರೆಡ್ಡಿ, ಭೈರತಿ ಸುರೇಶ್, ಮಾಂಕಾಳ ವೈದ್ಯ, ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್, ಶಾಲನಿ‌ ರಜನೀಶ್ ಗೋಯಲ್, ಗೌರವ್ ಗುಪ್ತ, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಮೆಟ್ರೋ ವ್ಯವಸ್ಥಾಪಕ‌ ನಿರ್ದೇಶಕ ಮಹೇಶ್ವರ್ ರಾವ್, ಬಿಡಿಎ ಆಯುಕ್ತ ಜಯರಾಮ್, ಆರೋಗ್ಯ ಇಲಾಖೆಯ ಆಯುಕ್ತ ಡಿ. ರಂದೀಪ್, ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್, ಡಿಸಿಎಂ ಕಾರ್ಯದರ್ಶಿ, ಬಿಎಂಆರ್ಡಿಎ ಆಯುಕ್ತ ರಾಜೇಂದ್ರ ಚೋಳನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ಪಾಟ್-1

ಸ್ಥಳ: ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ

ವಿಧಾನಸಭಾ ಕ್ಷೇತ್ರ: ವಿಜಯನಗರ

ಯಾವ ವಾರ್ಡ್: ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ವಾರ್ಡ್

ಸಮಸ್ಯೆ ಏನು: ಗಾಳಿ ಆಂಜನೇಯ ದೇವಸ್ಥಾನ ಸಮೀಪದ ರಾಜಕಾಲುವೆಯಲ್ಲಿ ಮಳೆಗಾಲದಲ್ಲಿ ಪ್ರವಾಹ ಉಂಟಾಗುತ್ತಿದೆ.

ಮುಖ್ಯಮಂತ್ರಿಗಳ ಸೂಚನೆ ಏನು:
ಇದಕ್ಕೆ ಸಮಾನಾಂತರವಾಗಿ ಇನ್ನೊಂದು ಕಾಲುವೆ ನಿರ್ಮಿಸುವುದರಿಂದ ಪ್ರವಾಹ ತಗ್ಗಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಪ್ರವಾಹ ನಿಯಂತ್ರಣ ಕಾಮಗಾರಿಗೆ 11.5 ಕೋಟಿ ರೂ. ಅಂದಾಜು ವೆಚ್ಚದ ಯೋಜನೆ ರೂಪಿಸಲಾಗಿದ್ದು, ಈ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಈ ರಾಜಕಾಲುವೆಗೆ ಸಾರ್ವಜನಿಕರು ಕಸ ಎಸೆಯುವುದನ್ನು ತಡೆಗಟ್ಟಲು ಕ್ರಮ ವಹಿಸುವಂತೆ ಸೂಚಿಸಿದರು.

ಸಮಸ್ಯೆ ಬಗೆಹರಿಸಲು ಕೊಟ್ಟ ಕಾಲ ಮಿತಿ ಮಳೆಗಾಲದೊಳಗೆ ಪೂರ್ಣಗೊಳಿಸಲು ಸೂಚಿಸಿದರು.

ಎಚ್ಚರಿಕೆ: ಈ ವರ್ಷ ಸಮಸ್ಯೆಗೆ ಶಾಶ್ವತ ಪರಿಹಾರ ಆಗಬೇಕು. ಇಲ್ಲದಿದ್ದರೆ ಸಸ್ಪೆಂಡ್ ಆಗ್ತೀರ ಎಂದು ಚೀಫ್ ಎಂಜಿನಿಯರ್ ಗೆ ಸಿಎಂ ಎಚ್ಚರಿಕೆ ನೀಡಿದ್ದಾರೆ.

ಸ್ಪಾಟ್ 2-

ಸ್ಥಳ: ನಾಯಂಡಹಳ್ಳಿ

ವಿಧಾನಸಭಾ ಕ್ಷೇತ್ರ: ವಿಜಯನಗರ

ಯಾವ ವಾರ್ಡ್: ನಾಯಂಡಹಳ್ಳಿ ವಾರ್ಡ್

ಸಮಸ್ಯೆ ಏನು: ರಾಜಕಾಲುವೆಯಲ್ಲಿ ಮಳೆಗಾಲ ಪ್ರವಾಹ ಉಂಟಾಗುತ್ತಿದೆ. ಫ್ಲೈಓವರ್‌ ನಿರ್ಮಿಸಿದ್ದರಿಂದ ರಾಜಕಾಲುವೆಯ ವಿಸ್ತಾರ ಕಡಿಮೆ ಆಗಿದೆ.

ಮುಖ್ಯಮಂತ್ರಿಗಳ ಸೂಚನೆ ಏನು: ನೀರು ಸರಾಗವಾಗಿ ಹರಿದುಹೋಗಲು ಹೆಚ್ಚುವರಿ ಕಾಲುವೆ ಅಗತ್ಯವಿದೆ. ಏಳುಕೋಟಿ ವೆಚ್ಚದ ಕಾಮಗಾರಿ ಅನುಮೋದನೆಯಾಗಿದ್ದು, ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದನೆ ಅಗತ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ವಿವರಿಸಿದರು. ಅದರಂತೆ ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದನೆ ನೀಡಿ, ಕೂಡಲೇ ಬಿಬಿಎಂಪಿಯು ಕಾಮಗಾರಿ ಕೈಗೆತ್ತಿಕೊಳ್ಳಲು ಅನುವು ಮಾಡುವಂತೆ ಎರಡೂ ಇಲಾಖೆಗಳಿಗೆ ಸೂಚನೆ ನೀಡಿದರು.

ಕಾಲಮಿತಿ: ಈ ವರ್ಷದೊಳಗೆ

ಸ್ಥಳ- 3: ಬಿಟಿಎಂ ಮೆಟ್ರೋ ಸ್ಟೇಷನ್

ವಾರ್ಡ್- ಬಿಟಿಎಂ ಲೇಔಟ್‌

ವಿಧಾನಸಭೆ ಕ್ಷೇತ್ರ: ಬಿಟಿಎಂ ಲೇಔಟ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಸಂಚಾರ, ಸ್ಥಳ ಪರಿಶೀಲನೆ ವೇಳೆಗೆ ಬಿಟಿಎಂ ಮೆಟ್ರೋಸ್ಟೇಷನ್‌ಗೆ ಭೇಟಿ ನೀಡಿ ಮೇಲುಸೇತುವೆ ರಸ್ತೆ ಹಾಗೂ ಮೆಟ್ರೋ ಮಾರ್ಗಗಳೆರಡೂ ಒಂದರ ಮೇಲೊಂದು ಇರುವ ಡಬಲ್‌ ಡೆಕ್ಕರ್‌ – 2 tier ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಪರಿಶೀಲಿಸಿದರು. ಮೂರು ಕಿ.ಮೀ. ಉದ್ದದ ಈ ವ್ಯವಸ್ಥೆಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು, ಸಂಚಾರ ದಟ್ಟಣೆ ನಿವಾರಣೆಗೆ ಈ ಡಬ್ಬಲ್ ಡೆಕರ್ ಮಾದರಿಯನ್ನು ನಗರದ ಇತರ ಭಾಗಗಳಲ್ಲಿಯೂ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ಸಂಚಾರ ದಟ್ಟಣೆಗೆ ಪರಿಹಾರ ರೂಪವಾಗಿ ಈ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ.
ಇದಲ್ಲದೆ, ಸುಗಮ ಸಂಚಾರಕ್ಕಾಗಿ, ಬಿಟಿಎಂ ನಿಂದ ಬನಶಂಕರಿ ಕಡೆಗೆ ಹೋಗುವಾಗ, ರಾಘವೇಂದ್ರಸ್ವಾಮಿ ಟೆಂಪಲ್‌ ಸರ್ಕಲ್‌, ಜಯನಗರ 5ನೇ ಬ್ಲಾಕ್‌ನಲ್ಲಿ ಅಂಡರ್‌ ಪಾಸ್‌ ನಿರ್ಮಾಣಕ್ಕೆ ಬೇಡಿಕೆ ಇದ್ದು, ಇಲ್ಲಿ ಅಂಡರ್‌ ಪಾಸ್‌ ನಿರ್ಮಿಸಲು ಸೂಚಿಸಿದರು.

Related Articles

Back to top button