Kannada NewsKarnataka NewsLatestPolitics

*ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ 19 ನಾಯಕರಿಗೆ ಹೈಕಮಾಂಡ್ ಬುಲಾವ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಹಿನ್ನೆಲೆಯಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಸೇರಿದಂತೆ ರಾಜ್ಯದ ಹಲವು ನಾಯಕರಿಗೆ ಬುಲಾವ್ ನೀಡಿದೆ.

19 ಕಾಂಗ್ರೆಸ್ ನಾಯಕರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ ಸೇರಿದಂತೆ ಹಲವರು ಡಿಸಿಎಂ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

Home add -Advt

ಹೈಕಮಾಂಡ್ ನಾಯಕರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಜಮೀರ್ ಅಹ್ಮದ್, ಶಿವಾನಂದ ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ, ಪ್ರಿಯಾಂಕ್ ಖರ್ಗೆ, ಮಧುಬಂಗಾರಪ್ಪ ಸೇರಿ 19 ಜನರಿಗೆ ಬುಲಾವ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button