Karnataka NewsLatestPolitics

*ಪಟ್ಟದ ಆಟ: ಹೈಕಮಾಂಡ್ ನಾಯಕರ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ ಮುಖಾಮುಖಿಯಾದ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ನಾಯಕತ್ವ ಬದಲಾವಣೆ ಕುರಿತು ಭಾರಿ ಚರ್ಚೆ ನಡುವೆ ಹೈಕಮಾಂಡ್ ಬುಲಾವ್ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತ್ಯೇಕವಾಗಿ ದೆಹಲಿಗೆ ತೆರಳಿದ್ದು, ಇಬ್ಬರು ನಾಯಕರ ಜೊತೆ ವರಿಷ್ಠರು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಸಿವಕುಮಾರ್ ಜೊತೆ ಹೈಕಮಾಂಡ್ ನಾಯಕರು ಪ್ರತ್ಯೇಕವಾಗಿ ಒನ್ ಟು ಒನ್ ಮೀಟಿಂಗ್ ನಡೆಸಲಿದ್ದಾರೆ. ಈ ಹೈ ವೋಲ್ಟೇಜ್ ಮೀಟಿಂಗ್ ಗೂ ಮುನ್ನ ದೆಹಲಿಯ ಎಐಸಿಸಿ ಕಚ್ಚೇರಿಯ ಇಂದಿರಾ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಹಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮುಖಾಮುಖಿಯಾಗಿದ್ದಾರೆ.

Home add -Advt

ರಾಹುಲ್ ಗಾಂಧಿ ಅವರೊಂದಿಗೆ ಮಹತ್ವದ ಚರ್ಚೆಗೂ ಮುನ್ನ ಸಿಎಂ ಸಿದ್ದರಮಾಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ಕಾಲ ಸಮಾಲೋಚನೆ ನಡೆಸಿದರು. ಬಳಿಕ ಹೈಕಮಾಂಡ್ ನಾಯಕರು ಸಿಎಂ ಸಿದ್ದರಮಾಯ್ಯ ಅವರನ್ನು ಪ್ರತ್ಯೇಕವಾಗಿ ಕರೆದು ಚರ್ಚೆ ನಡೆಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ಇಂದು ಮೂರು ಸುತ್ತಿನ ನಿರ್ಣಾಯಕ ಸಭೆಗಳು ನಡೆಯಲಿವೆ. ಒಟ್ಟಾರೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ವಿಚಾರ ಇಂದು ಅಂತಿಮ ಘಟ್ಟಕ್ಕೆ ತಲುಪಿದ್ದು, ಹೈಕಮಾಂಡ್ ನಾಯಕರು ಯಾವ ನಿರ್ಧಾರ ಪ್ರಕಟಿಸಲಿದ್ದಾರೆ? ಎಂಬುದೇ ಕುತೂಹಲ ಮೂಡಿಸಿದೆ.

Related Articles

Back to top button