Politics

*ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು ಹರ್ಷಚಿತ್ತ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಡಿ.ಕೆ. ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿದರು.

ನಾನು ಹಾಗೂ ಮುಖ್ಯಮಂತ್ರಿಗಳು ಮಂಜುನಾಥನ, ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ. ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ, ಬೆಳೆಯಾಗಿ ರಾಜ್ಯದ ಜನರು ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇವೆ ಎಂದರು.

Home add -Advt

ದೇವರ ದರ್ಶನದ ವೇಳೆ ಅನೇಕ ಮಹಿಳಾ ಭಕ್ತಾಧಿಗಳು ತಮಗೆ ಪ್ರತಿ ತಿಂಗಳು 2 ಸಾವಿರ ಹಣ ಬರುತ್ತಿದೆ ಎಂದು ಸಂತೋಷ ಹಂಚಿಕೊಂಡರು. ಅವರ ಪ್ರಾರ್ಥನೆ ಹಾಗೂ ಆಶೀರ್ವಾದ ನಮಗೆ ಹೆಚ್ಚಿನ ಶಕ್ತಿ ನೀಡುತ್ತದೆ. ಅವರ ಮನೆಯಲ್ಲಿ ಗೃಹಜ್ಯೋತಿ ಬೆಳಗುತ್ತಿದೆ. ಅನ್ನಭಾಗ್ಯ ಸಿಗುತ್ತಿದೆ. ಈ ಯೋಜನೆಗಳನ್ನು ಜಾರಿ ಮಾಡಿರುವುದಕ್ಕೆ ಮಂಜುನಾಥ ನಮಗೆ ಆಶೀರ್ವಾದ ಮಾಡಲಿದ್ದಾನೆ ಎಂದು ನಂಬಿದ್ದೇನೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button