Kannada NewsKarnataka NewsLatestPolitics

*ವಿಪಕ್ಷದವರು ನಮ್ಮನ್ನು ದೂರ ಮಾಡಲು ಪ್ರಯತ್ನಿಸಿದಷ್ಟೂ ನಾವು ಹತ್ತಿರವಾಗುತ್ತಿದ್ದೇವೆ; ಬಿಜೆಪಿಗೆ ಸಿಎಂ ತಿರುಗೇಟು*

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಪಕ್ಷದವರು ನಮ್ಮನ್ನು ದೂರ ಮಾಡಲು ಪ್ರಯತ್ನಿಸಿದಷ್ಟೂ ನಾವು ಹತ್ತಿರವಾಗುತ್ತಿದ್ದೇವೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಬಿರುಕಿದೆ. ಮುಖ್ಯಮಂತ್ರಿ-ಉಪಮುಖ್ಯಮಂತ್ರಿ ನಡುವೆ ಹೊಂದಾಣಿಕೆಯಿಲ್ಲ ಎಂಬ ಬಿಜೆಪಿ ನಾಯಕರ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿಎಂ, ವಿಪಕ್ಷದವರು ನಮ್ಮನ್ನು ದೂರ ಮಾಡಲು ಯತ್ನಿಸಿದಷ್ಟು ನಾವು ಹತ್ತಿರವಾಗುತ್ತಿದ್ದೇವೆ ಎಂದು ಹೇಳಿದರು.

ವಿರೋಧ ಪಕ್ಷದವರು ನಮ್ಮ ಸಂಬಂಧದ ಬಗ್ಗೆ ಮಾತನಾಡುತ್ತಲೇ ಇರಲಿ. ನಾವು ಮಾತ್ರ ಸದಾ ಒಟ್ಟಾಗಿ ಇರುವುದನ್ನು ನೋಡುತ್ತಾ ಇರುತ್ತೀರಿ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಹರಕೆ ಹೊತ್ತಿದ್ದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡ ದೇವತೆ ಚಾಮುಂಡಿ ತಾಯಿಗೆ ಹರಕೆ ತೀರಿಸಿದರು. ಇದೇ ವೇಳೆ ನಾಳೆ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ಹಿನ್ನೆಲೆಯಲ್ಲಿ ಚಾಮುಂಡಿ ದೇವಿಗೆ ಮೊದಲ ಗೃಹಲಕ್ಷ್ಮೀ ಕಾಣಿಕೆ ಸಮರ್ಪಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button