Politics

*ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನಗರ ಪ್ರದಕ್ಷಿಣೆ ದಿಢೀರ್ ರದ್ದು*

ಪ್ರಗತಿವಾಹಿನಿ ಸುದ್ದಿ; ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಗಳೂರು ನಗರ ಪ್ರದಕ್ಷಿಣೆ ಕಾರ್ಯಕ್ರಮ ದಿಢೀರ್ ರದ್ದಾಗಿದೆ.

ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಖುದ್ದು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದರು. ಸಂಜೆ 4:30ಕ್ಕೆ ನಗರ ಪ್ರದಕ್ಷಿಣೆ ನಿಗದಿಯಾಗಿತ್ತು. ಆದರೆ ಕಾರಣಾಂತರದಿಂದಾಗಿ ನಗರ ಪ್ರದಕ್ಷಿಣೆ ರದ್ದಾಗಿದೆ. ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಜಲಾವೃತಗೊಂಡ ಪ್ರದೇಶ ವೀಕ್ಷಿಸಿ, ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಬಿಬಿಎಂಪಿ ಕಂಟ್ರೋಲ್ ರೂಂ ಗೆ ಭೇಟಿ ನೀಡಲಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button