Latest

*ಕಂಠೀರವ ಕ್ರೀಡಾಂಗಣದ ಬಳಿ ಲಾಠಿ ಪ್ರಹಾರ; ಪೊಲೀಸರು ಸೇರಿ ಹಲವರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಬೆಂಗಳೂರಿನ ಕಂಠೀರವ ಕ್ರೀಡಾಂಗಣದತ್ತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನರು ಆಗಮಿಸುತ್ತಿದ್ದಾರೆ. ಈ ನಡುವೆ ಜನರ ಗುಂಪಿನ ನಡುವೆ ನೂಕಾಟ ತಳ್ಳಾಣ ನಡೆದಿದ್ದು, ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ ಘಟನೆ ನಡೆದಿದೆ.

ಕಂಠೀರವ ಕ್ರೀಡಾಂಗಣದ ಸ್ವಾರ್ವಜನಿಕ ಪ್ರವೇಶ ದ್ವಾರದ ಬಳಿ ಕಾರ್ಯಕರ್ತರ ನಡುವೆ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಟ್ರಾಫಿಕ್ ಇನ್ಸ್ ಪೆಕ್ಟರ್ ರಾವ್ ಗಣೇಶ್ ಸೇರಿ ಹಲವರಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

https://pragati.taskdun.com/chance-of-rain-in-many-parts-of-the-state-from-today-meteorological-department-forecast/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button