Belagavi NewsBelgaum NewsKannada NewsKarnataka NewsPolitics

*20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ*

ಪ್ರಗತಿವಾಹಿನಿ ಸುದ್ದಿ: ಮೇ 7ರಂದು 2ನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Home add -Advt

ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೊದಲ ಹಂತದ ಚುನಾವಣೆಯಲ್ಲಿ 8-9ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದ್ದೇವೆ. 2ನೇ ಹಂತದ ಚುನಾವಣೆಯಲ್ಲಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು, ಬಡವರಿಗೆ ಅನುಕೂಲವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ ಇನ್ನಷ್ಟು ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸಿಂಗ್ ಸುರ್ಜೆವಾಲಾ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಚ್.ಸಿ. ಮಹಾದೇವಪ್ಪ, ಮೃಣಾಲ್‌ ಹೆಬ್ಬಾಳಕರ್, ರಾಜು ಸೇಠ್, ಸಲೀಂ ಅಹ್ಮದ್, ಡಾ.ಎಂ.ಸಿ.ಸುಧಾಕರ, ರಾಜೀವ ಗೌಡ, ಲಕ್ಷ್ಮಣ ರಾವ್ ಚಿಂಗಳೆ, ದಿನೇಶ ಗೂಳಿಗೌಡ,

ನಾಗರಾಜ ಯಾದವ, ವಿನಯ ನಾವಲಗಟ್ಟಿ, ಅಶೋಕ ಪಟ್ಟಣ, ಪುಷ್ಪಾ ಅಮರನಾಥ ಮೊದಲಾದವರಿದ್ದರು.

Related Articles

Back to top button