Latest

ರಾಹುಲ್ ಗಾಂಧಿ ಮೇಲೆ ಹಲ್ಲೆಗೆ ಖಂಡನೆ; ಕಾಂಗ್ರೆಸ್ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ;  ಬೆಂಗಳೂರು: ಉತ್ತರ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಸಂತ್ರಸ್ತೆಯ ಪೋಷಕರಿಗೆ ಸಾಂತ್ವನ ಹೇಳಲು ತೆರಳುತ್ತಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾದ ಪ್ರಿಯಾಂಕ ಗಾಂಧಿ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದನ್ನು ಖಂಡಿಸಿ ವಿಪಕ್ಷ ನಾಯಕ ಸಿದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂದೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Home add -Advt

ಈ ವೇಳೆ ಹತ್ರಾಸ್ ಗೆ ತೆರಳುತ್ತಿದ್ದಾಗ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರ ಮೇಲೆ ಹಲ್ಲೆ ನಡೆಸಿ, ಅವರನ್ನು ವಶಕ್ಕೆ ಪಡೆದ ಉತ್ತರ ಪ್ರದೇಶ ಸರ್ಕಾರ ಹಾಗೂ ಪೊಲೀಸರ ಕ್ರಮವನ್ನು ಖಂಡಿಸಿದರು.

Related Articles

Back to top button