
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇದೇ ವೇಳೆ 8 ಹಿರಿಯ ಶಾಸಕರು ನೂತನ ಸಚಿವರಾಗಿ ಪ್ರದಗ್ರಹಣ ಮಾಡಿದರು.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಐತಿಹಾಸಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು.
ಇದೇ ವೇಳೆ ಶಾಸಕರಾದ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹ್ಮದ್ ಸೇರಿದಂತೆ 8 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
 
					 
				 
					 
					 
					 
					
 
					 
					 
					

