Latest

*ನೂತನ ಸಚಿವರಾಗಿ ಡಾ.ಜಿ.ಪರಮೇಶ್ವರ್, ಮುನಿಯಪ್ಪ, ಸತೀಶ್ ಜಾರಕಿಹೊಳಿ ಸೇರಿ 8 ಶಾಸಕರ ಪ್ರಮಾಣವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇದೇ ವೇಳೆ 8 ಹಿರಿಯ ಶಾಸಕರು ನೂತನ ಸಚಿವರಾಗಿ ಪ್ರದಗ್ರಹಣ ಮಾಡಿದರು.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಐತಿಹಾಸಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು.

Home add -Advt

ಇದೇ ವೇಳೆ ಶಾಸಕರಾದ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹ್ಮದ್ ಸೇರಿದಂತೆ 8 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

https://pragati.taskdun.com/siddaramaiahd-k-shivakumaroath/

Related Articles

Back to top button