Latest

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 13 ಕೊರೊನಾ ರೋಗಿಗಳ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮೊನ್ನೆಯಷ್ಟೇ ನಾಸಿಕ್ ನ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಆಕ್ಸಿಜನ್ ಸೋರಿಕೆ ದುರಂತ ಮಾಸುವ ಮುನ್ನವೇ ಮುಂಬೈ ನ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 13 ಕೊರೊನಾ ರೋಗಿಗಳು ಸಾವನ್ನಪ್ಪಿದ್ದಾರೆ.

ಇಲ್ಲಿನ ವಿರಾನ್ ನ ವಿಜಯ್ ವಲ್ಲಭ್ ಆಸ್ಪತ್ರೆಯಲ್ಲಿ ಮುಂಜಾನೆ 3:30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಐಸಿಯುನಲ್ಲಿದ್ದ 13 ರೋಗಿಗಳು ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.

ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ. ಪ್ರಕರಣವನ್ನು ಸಿಎಂ ಉದ್ಧವ್ ಠಾಕ್ರೆ ತನಿಖೆಗೆ ಆದೇಶಿಸಿದ್ದಾರೆ.

Related Articles

Back to top button