Politics

*Black spots ಗುರುತಿಸಿ ಅಪಘಾತಗಳನ್ನು ತಪ್ಪಿಸಲು ಏನು ಕ್ರಮ ಕೈಗೊಂಡಿದ್ದೀರಿ? ಡಿಸಿಗಳಿಗೆ ಸಿಎಂ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಟ್ಟು 9 ರೈಲ್ವೇ ಯೋಜನೆಗಳು ಅನುಷ್ಠಾನ ಹಂತದಲ್ಲಿದ್ದು, ಇದಕ್ಕೆ ಅಗತ್ಯವಾದ ಭೂಸ್ವಾಧೀನ ಕಾರ್ಯವನ್ನು ಆಯಾ ಜಿಲ್ಲಾಧಿಕಾರಿಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ತಾಣಗಳನ್ನು ಗುರುತಿಸಿ ಕ್ರಿಯಾ ಯೋಜನೆಗಳನ್ನು ರೂಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ.

Home add -Advt

ಕೆಲವು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ರಸ್ತೆ ಅಪಘಾತಗಳು ಹೆಚ್ಚಾಗಿವೆ. ರಸ್ತೆ ಸುರಕ್ಷತಾ ಸಪ್ತಾಹಗಳನ್ನು ಕಾಟಾಚಾರಕ್ಕೆ ನಡೆಸಬಾರದು. ಅಪಘಾತಗಳು ಹೆಚ್ಚು ನಡೆಯುವ ಸ್ಥಳ (Black spots) ಗಳನ್ನು ಗುರುತಿಸಿ ಅಪಘಾತಗಳನ್ನು ತಪ್ಪಿಸಲು ಏನು ಕ್ರಮ ಕೈಗೊಂಡಿದ್ದೀರಿ? ಅಪಘಾತ ಪ್ರಮಾಣ ಯಾವುದೇ ಕಾರಣಕ್ಕೂ ಹೆಚ್ಚಾಗುವುದನ್ನು ಒಪ್ಪಲು ಸಾಧ್ಯವಿಲ್ಲ. ಇದಕ್ಕೆ ಜಿಲ್ಲಾಧಿಕಾರಿ ಅವರೇ ಹೊಣೆ.

ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರು ಕಠಿಣ ಕ್ರಮ ಕೈಗೊಂಡರೆ ಮೈಕ್ರೋ ಫೈನಾನ್ಸ್ ಹಾವಳಿಯನ್ನು ಜಿಲ್ಲೆಯಲ್ಲಿ ಸಂಪೂರ್ಣವಾಗಿ ಮಟ್ಟ ಹಾಕಲು ಸಾಧ್ಯವಿದೆ.

ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 91 ಅಸಂಘಟಿತ ಕಾರ್ಮಿಕ ವರ್ಗಗಳನ್ನು ಗುರುತಿಸಲಾಗಿದ್ದು, ಇದುವರೆಗೆ 25,61,105 ಕಾರ್ಮಿಕರನ್ನು ನೋಂದಾಯಿಸಲಾಗಿದೆ. ಎಲ್ಲಾ ಜಿಲ್ಲಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಸಂಘಟಿತ ಕಾರ್ಮಿಕರನ್ನು ಈ ಯೋಜನೆಯಡಿ ನೋಂದಾಯಿಸಲು ಕ್ರಮ ಕೈಗೊಳ್ಳಬೇಕು.

ಮಾದಕ ದ್ರವ್ಯ ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಮುಂದುವರೆಸಬೇಕು ಎಂದು ಸೂಚಿಸಿದರು.

Related Articles

Back to top button