Latest

*ಅರಣ್ಯ ವಾಸಿಗಳಿಗೆ ಭೂಮಿ ಹಕ್ಕು ಕುರಿತು ಮಹತ್ವದ ನಿರ್ಣಯ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅನುಸೂಚಿತ ಬುಡಕಟ್ಟುಗಳ ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮದಡಿ 298798 ಅರ್ಜಿ ಸ್ವೀಕೃತಗೊಂಡಿದ್ದು, 258086 ಅರ್ಜಿಗಳು ತಿರಸ್ಕೃತಗೊಂಡಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಸಿಇಒಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 24186 ಅರ್ಜಿಗಳು ಇತ್ಯರ್ಥವಾಗದೇ ಬಾಕಿಯಿವೆ. ಇದುವರೆಗೆ 16426 ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, 56479 ಎಕ್ರೆ ಭೂಮಿ ಮಂಜೂರು ಮಾಡಲಾಗಿದೆ. ಅರಣ್ಯವಾಸಿಗಳಿಗೆ ಭೂಮಿ ಹಕ್ಕು ಖಾತ್ರಿಪಡಿಸಲು ಮುಂದಿನ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಬುಡಕಟ್ಟು ಸಮುದಾಯ ಅಭಿವೃದ್ಧಿ
ರಾಜ್ಯದ 5ಜಿಲ್ಲೆಗಳ ಹಾಡಿಗಳಲ್ಲಿ ವಾಸಿಸುತ್ತಿರುವ ಜೇನುಕುರುಬ ಹಾಗೂ ಕೊರಗ ಜನಾಂಗದವರಿಗೆ ಸೌಲಭ್ಯಗಳನ್ನು ಕಲ್ಪಿಸಲು ಪಿಎಂ ಜನಮನ್‌ ಯೋಜನೆ ಜಾರಿಯಲ್ಲಿದೆ.

ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ 44040 ಜೇನುಕುರುಬ ಹಾಗೂ 13007 ಕೊರಗರು ಇದ್ದಾರೆ. ಈ ಜನಾಂಗದ 19 ಸಾವಿರ ಕುಟುಂಬಗಳಿದ್ದು, 6871 ಕುಟುಂಬಗಳಿಗೆ ಮಾತ್ರ ಮನೆಯಿದೆ. 12ಸಾವಿರ ಮನೆಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಸ್ಥಳ ಗುರುತಿಸಿ ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಬೇಕು

ಗುರುತಿನ ಚೀಟಿ ಸಮಸ್ಯೆಯನ್ನು ಬಗೆಹರಿಸಬೇಕು. ಈ ಜನಾಂಗಗಳ ಅಭಿವೃದ್ಧಿಗೆ 9 ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಯೋಜನೆಗಳಿದ್ದು, ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿ ಅನುಷ್ಠಾನ ಮಾಡಬೇಕು ಎಂದು ಸೂಚನೆ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button