Uncategorized

*ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು; ಆತ್ಮೀಯ ಸ್ವಾಗತ ಕೋರಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಪ್ರವಾಸ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೃತ್ಪೂರ್ವಕವಾಗಿ ಸ್ವಾಗತಿಸಿದರು.

ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಸತ್ಯಸಾಯಿ ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಸಚಿವ ಕೆ.ಜೆ. ಜಾರ್ಜ್‌ ಉಪಸ್ಥಿತರಿದ್ದರು.

ಮುದ್ದೇನಹಳ್ಳಿ ಬಳಿಯ ಸತ್ಯಸಾಯಿ ಯುನಿವರ್ಸಿಟಿ ಫಾರ್ ಹ್ಯೂಮನ್ ಎಕ್ಸ್ ಲೆನ್ಸ್ ವಿಶ್ವವಿದ್ಯಾಲಯದ ಘಟಟಿಕೋತ್ಸವದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿಗಳು ರಾಜ್ಯಕ್ಕೆ ಆಗಮಿಸಿದ್ದಾರೆ.


Home add -Advt

Related Articles

Back to top button