*ನಾಳೆ ಬೆಳಗಾವಿಗೆ ಸಿಎಂ ಸಿದ್ದರಾಮಯ್ಯ: ಅಲ್ಲಿಯೇ ವಾಸ್ತವ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಧಾರವಾಡ ಹಾಗೂ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ನಾಳೆ ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಧಾರವಾಡಕ್ಕೆ ತೆರಳಲಿರುವ ಸಿಎಂ ಸಿದ್ದರಾಮಯ್ಯ, ನವಲಗುಂದದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ ಧಾರವಾಡದಿಂದ ಬೆಳಗಾವಿಗೆ ತೆರಳಿಲಿದ್ದು, ಮಧ್ಯಾಹ್ನ 3:30ರ ಸುಮಾರಿಗೆ ಬೆಳಗಾವಿ ಸುವರ್ಣ ಸೌಧದ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬೆಳಗಾವಿಯಲ್ಲಿಯೇ ವಾಸ್ತವ್ಯ ಹೂಡಲಿರುವ ಸಿಎಂ ಸಿದ್ದರಾಮಯ್ಯ, ಸೋಮವಾರದಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ.Home add -Advt … Continue reading *ನಾಳೆ ಬೆಳಗಾವಿಗೆ ಸಿಎಂ ಸಿದ್ದರಾಮಯ್ಯ: ಅಲ್ಲಿಯೇ ವಾಸ್ತವ್ಯ*