ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ನಮನ ಸಲ್ಲಿಸಿದರು.
ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕೆಲ ಕಾಲ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು, ಶಾಸಸಕರು, ಕಾಂಗ್ರೆಸ್ ವರಿಷ್ಠರು ಸೇರಿದಂತೆ ಹಲವು ಗಣ್ಯರು ಡಾ.ಮನಮೋಹನ್ ಸಿಂಗ್ ಅವರ ಅಂತಿಮ ದರ್ಶನ ಪಡೆದರು.
ಬಳಿಕ ಎಐಸಿಸಿ ಕಚೇರಿಯಿಂದ ನಿಗಮ ಬೋದ್ ಘಾಟ್ ಗೆ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರದ ಮೆರವಣಿಗೆ ಆರಂಭವಾಗಿದ್ದು, ನಿಗಮ ಘಾಟ್ ನಲ್ಲಿ ಭಾರತದ ಆರ್ಥಿಕ ಹರಿಕಾರ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ