Latest

*ತಂದೆಗಾಗಿ ಕ್ಷೇತ್ರ ತ್ಯಾಗಕ್ಕೆ ಸಿದ್ಧ ಎಂದ ಶಾಸಕ ಯತೀಂದ್ರ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಗದಗ: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಈಗಾಗಲೇ ಘೋಷಿಸಿದ್ದಾರೆ. ಆದಾಗ್ಯೂ ಕೊನೆ ಕ್ಷಣದಲ್ಲಿ ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ ಮಾಡುತ್ತಾರೆ, ವರುಣಾದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ಪುತ್ರ ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ, ತಂದೆಗಾಗಿ ಕ್ಷೇತ್ರ ತ್ಯಾಗಕ್ಕೆ ಸಿದ್ಧ ಎಂದು ಮತ್ತೆ ಹೇಳಿಕೆ ನೀಡಿದ್ದಾರೆ.

ಗದಗದಲ್ಲಿ ಮಾತನಾಡಿದ ಡಾ.ಯತೀಂದ್ರ ಸಿದ್ದರಾಮಯ್ಯ, ತಂದೆಗಾಗಿ ಕ್ಷೇತ್ರ ತ್ಯಾಗಮಾಡಲು ಸಿದ್ಧನಿದ್ದೇನೆ. ಅವರು ವರುಣಾದಿಂದ ಸ್ಪರ್ಧಿಸಲಿ ಎಂಬುದು ನಮ್ಮ ಇಚ್ಛೆ. ಆದರೆ ಅವರಿಗೆ ಕೋಲಾರದಲ್ಲಿ ಸ್ಪರ್ಧೆ ಮಾಡುವ ಇಚ್ಛೆ. ಹೈಕಮಾಂಡ್ ಅನುಮತಿ ನೀಡಬೇಕು ಎಂದು ಹೇಳುತ್ತಿದ್ದಾರೆ ಎಂದರು.

ನಾನು ಕೂಡ ವರುಣಾದಿಂದ ಸ್ಪರ್ಧೆ ಮಾಡುವಂತೆ ಅವರಿಗೆ ಹೇಳುತ್ತಿದ್ದೇನೆ. ನಾನು ಕ್ಷೇತ್ರ ಬಿಟ್ಟುಕೊಡುತ್ತಿಲ್ಲ, ನಾನೇ ಅವರನ್ನು ಕರೆಯುತ್ತಿದ್ದೇನೆ. ಅವರ ಕೊನೆ ಚುನಾವಣೆಯಾಗಿರುವುದರಿಂದ ವರುಣಾ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದು ನನ್ನ ಹಾಗೂ ಕ್ಷೇತ್ರದ ಜನರ ಆಸೆ. ಅವರು ವರುಣಾದಿಂದ ಶಾಸಕರಾಗಿ ಆಯ್ಕೆಯಾಗಿ ಜನರ ಸೇವೆ ಸಲ್ಲಿಸಿ ನಿವೃತ್ತಿಯಾಗಬೇಕು ಎಂಬುದು ಕಾರ್ಯಕರ್ತರ ಅಭಿಪ್ರಾಯವೂ ಆಗಿದೆ. ಎಲ್ಲವೂ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ ಎಂದು ಹೇಳಿದರು.

*ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಪ್ರಮೋದ್ ಮಧ್ವರಾಜ್*

Home add -Advt

https://pragati.taskdun.com/pramod-madhwarajattacksiddaramaiah/

Related Articles

Back to top button