Latest

*ಸಿಎಂ ಸಿದ್ದರಾಮಯ್ಯ ಆಪ್ತರಿಗೂ ಇಡಿ ದಾಳಿ ಭೀತಿ: ಶೀಘ್ರದಲ್ಲೇ ದಾಳಿ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕೂಡ ಎಫ್ಐಆರ್ ದಾಖಲಿಸಿಕೊಂಡಿದ್ದು, ತೆರೆಮರೆಯಲ್ಲಿಯೇ ಕಾರ್ಯಾಚರಣೆ ಆರಂಭಿಸಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ ಎಫ್ಐಆರ್ ಬೆನ್ನಲ್ಲೇ ಸಿದ್ದರಾಮಯ್ಯ ಅವರ ಆಪ್ತರಿಗೂ ಆತಂಕ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಆಪ್ತರ ಮನೆ, ಕಚೇರಿ ಮೇಲೂ ಶೀಘ್ರದಲ್ಲೇ ಇಡಿ ದಾಳಿ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈಗಾಗಲೇ ಸಿಎಂ ಆಪ್ತರ ಫೋನ್ ಕಾಲ್, ಬ್ಯಾಂಕ್ ಖಾತೆ ಮೇಲೆ ತೀವ್ರ ನಿಗಾವಹಿಸಿರುವ ಇಡಿ, ಹಲವು ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತಿದೆ. ಜಾರ್ಖಂಡ್ ಮಾದರಿಯಲ್ಲಿ ಇಡಿ ದಾಳಿ ನಡೆಸಲು ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ.


Related Articles

Back to top button