Latest

ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ ನೇಮಕ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜ್ಯದ ನೂತನ ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಹಾಗೂ ಕಿಶನ್ ರೆಡ್ಡಿ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.

ನವದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಕರ್ನಾಟಕ ನೂತನ ಸಿಎಂ ಆಯ್ಕೆ ವಿಚಾರವಾಗಿ ಚರ್ಚೆ ನಡೆದಿದ್ದು, ಸಭೆಯಲ್ಲಿ ಧರ್ಮೇಂದ್ರ ಪ್ರಧಾನ್ ಹಾಗೂ ಕಿಶನ್ ರೆಡ್ಡಿ ಇಬ್ಬರು ನಾಯಕರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.

Home add -Advt

ಸುದ್ದಿಗಾರರೊಂದಿಗೆ ಮಾತನಾಡಿದ ಕಿಶನ್ ರೆಡ್ಡಿ, ನೂತನ ಸಿಎಂ ಆಯ್ಕೆ ಸಂಬಂಧ ಕರ್ನಾಟಕ್ಕೆ ತೆರಳುತ್ತಿದ್ದು, ಶಾಸಕಾಂಗ ಪಕ್ಷದ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗುವುದು. ಸಭೆಯಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ. ಒಟ್ಟಾರೆ ರಾಜ್ಯದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದು ಇಂದೇ ಫೈನಲ್ ಆಗುವ ಸಾಧ್ಯತೆ ದಟ್ಟವಾಗಿದೆ.
ಇದು ಹೊಸ ನಾಯಕನ ಆಯ್ಕೆ ಸಂದರ್ಭ; ಯಾರು ಸೂಕ್ತ ಎಂದು ಹೈಕಮಾಂಡ್ ನಿರ್ಧರಿಸುತ್ತೆ ಎಂದ ನಿರಾಣಿ

Related Articles

Back to top button