Kannada NewsKarnataka NewsLatestPolitics

*ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ; ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲಾರರು: ಸಿದ್ದರಾಮಯ್ಯ ಭಾವುಕ ಸಂದೇಶ*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿಗೆ ಭೇಟಿ ನೀಡಿದ್ದು, ಇದರ ಬೆನ್ನಲ್ಲೇ ಭಾವುಕ ಸಂದೇಶವೊಂದನ್ನು ಎಕ್ಸ್​ ನಲ್ಲಿ​ ಪೋಸ್ಟ್​ ಮಾಡಿದ್ದಾರೆ.

ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ. ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲಾರರು. ಅದು ನನ್ನ ಮತ್ತು ನಾನು ನಂಬುವ ಜನತಾ ಜನಾರ್ಧನರ ನಡುವಿನ‌ ಶಾಶ್ವತ ಒಪ್ಪಂದ. ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಜನರ ಪ್ರೀತಿ ನಿರಂತರ ಎಂದು ಬರೆದುಕೊಂಡಿದ್ದಾರೆ.

Home add -Advt

ರಾಜಕೀಯ ಅಧಿಕಾರ ಎನ್ನುವುದು ಜನರ ಸೇವೆ ಮಾಡಲು ಒದಗಿಬಂದ ಅವಕಾಶದ ಭಾಗ್ಯ ಎಂದು ನಾನು ತಿಳಿದುಕೊಂಡವನು. ಮುಖ್ಯಮಂತ್ರಿಯ ಪದತ್ಯಾಗ ಮಾಡಿದ ದಿನದಿಂದ ಹೋದಲ್ಲಿ, ಬಂದಲ್ಲಿ ಜನತೆ ವ್ಯಕ್ತಪಡಿಸುತ್ತಿರುವ ಪ್ರೀತಿ, ಅಭಿಮಾನ, ವಿಶ್ವಾಸವನ್ನು ನೋಡಿದರೆ ಅಧಿಕಾರವನ್ನು ಬಳಸಿಕೊಂಡು ಜಗಮೆಚ್ಚುವ ರೀತಿಯಲ್ಲಿ ಜನಸೇವೆ ಮಾಡಿದ್ದೇನೆ ಎಂಬ ಸಾರ್ಥಕ್ಯದ ಭಾವನೆ…

‘ರಾಜಕೀಯ ಅಧಿಕಾರ ಎನ್ನುವುದು ಜನರ ಸೇವೆ ಮಾಡಲು ಒದಗಿಬಂದ ಅವಕಾಶದ ಭಾಗ್ಯ ಎಂದು ನಾನು ತಿಳಿದುಕೊಂಡವನು. ಮುಖ್ಯಮಂತ್ರಿಯ ಪದತ್ಯಾಗ ಮಾಡಿದ ದಿನದಿಂದ ಹೋದಲ್ಲಿ, ಬಂದಲ್ಲಿ ಜನತೆ ವ್ಯಕ್ತಪಡಿಸುತ್ತಿರುವ ಪ್ರೀತಿ, ಅಭಿಮಾನ, ವಿಶ್ವಾಸವನ್ನು ನೋಡಿದರೆ ಅಧಿಕಾರವನ್ನು ಬಳಸಿಕೊಂಡು ಜಗಮೆಚ್ಚುವ ರೀತಿಯಲ್ಲಿ ಜನಸೇವೆ ಮಾಡಿದ್ದೇನೆ ಎಂಬ ಸಾರ್ಥಕ್ಯದ ಭಾವನೆ ಮೂಡಿದೆ. ಪದತ್ಯಾಗದ ನಂತರ ಇಂದು ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದಾಗ ಇದೇ ಅನುಭವವಾಯಿತು. ಸೇರಿದ್ದ ಜನಸಾಗರ, ಅವರು ತೋರಿದ ಪ್ರೀತಿ-ಅಭಿಮಾನ ಕಂಡು ಮೂಕವಿಸ್ಮಿತನಾಗಿದ್ದೇನೆ. ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಜನರ ಪ್ರೀತಿ ನಿರಂತರ. ನನ್ನ ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ಪ್ರೀತಿಸುವ ದೊಡ್ಡ ಜನಸಮೂಹವನ್ನೇ ಸಂಪಾದಿಸಿದ್ದೇನೆ ಎನ್ನುವ ಹೆಮ್ಮೆ ನನ್ನದು. ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ. ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲಾರರು. ಅದು ನನ್ನ ಮತ್ತು ನಾನು ನಂಬುವ ಜನತಾ ಜನಾರ್ಧನರ ನಡುವಿನ‌ ಶಾಶ್ವತ ಒಪ್ಪಂದ. ನಾಡಿನ ಉದ್ದಗಲಕ್ಕೂ ಯಾವ ನಿರೀಕ್ಷೆಯೂ ಇಲ್ಲದೆ ಪ್ರೀತಿ – ಅಕ್ಕರೆ ತೋರುತ್ತಿರುವ ಪ್ರೀತಿಯ ಬಂಧುಗಳ ಸೇವೆಗೆ ತಾನು ಸದಾ ಬದ್ಧ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.’ರಾಜಕೀಯ ಅಧಿಕಾರ ಎನ್ನುವುದು ಜನರ ಸೇವೆ ಮಾಡಲು ಒದಗಿಬಂದ ಅವಕಾಶದ ಭಾಗ್ಯ ಎಂದು ನಾನು ತಿಳಿದುಕೊಂಡವನು. ಮುಖ್ಯಮಂತ್ರಿಯ ಪದತ್ಯಾಗ ಮಾಡಿದ ದಿನದಿಂದ ಹೋದಲ್ಲಿ, ಬಂದಲ್ಲಿ ಜನತೆ ವ್ಯಕ್ತಪಡಿಸುತ್ತಿರುವ ಪ್ರೀತಿ, ಅಭಿಮಾನ, ವಿಶ್ವಾಸವನ್ನು ನೋಡಿದರೆ ಅಧಿಕಾರವನ್ನು ಬಳಸಿಕೊಂಡು ಜಗಮೆಚ್ಚುವ ರೀತಿಯಲ್ಲಿ ಜನಸೇವೆ ಮಾಡಿದ್ದೇನೆ ಎಂಬ ಸಾರ್ಥಕ್ಯದ ಭಾವನೆ ಮೂಡಿದೆ. ಪದತ್ಯಾಗದ ನಂತರ ಇಂದು ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದಾಗ ಇದೇ ಅನುಭವವಾಯಿತು. ಸೇರಿದ್ದ ಜನಸಾಗರ, ಅವರು ತೋರಿದ ಪ್ರೀತಿ-ಅಭಿಮಾನ ಕಂಡು ಮೂಕವಿಸ್ಮಿತನಾಗಿದ್ದೇನೆ. ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಜನರ ಪ್ರೀತಿ ನಿರಂತರ. ನನ್ನ ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ಪ್ರೀತಿಸುವ ದೊಡ್ಡ ಜನಸಮೂಹವನ್ನೇ ಸಂಪಾದಿಸಿದ್ದೇನೆ ಎನ್ನುವ ಹೆಮ್ಮೆ ನನ್ನದು. ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ. ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲಾರರು. ಅದು ನನ್ನ ಮತ್ತು ನಾನು ನಂಬುವ ಜನತಾ ಜನಾರ್ಧನರ ನಡುವಿನ‌ ಶಾಶ್ವತ ಒಪ್ಪಂದ. ನಾಡಿನ ಉದ್ದಗಲಕ್ಕೂ ಯಾವ ನಿರೀಕ್ಷೆಯೂ ಇಲ್ಲದೆ ಪ್ರೀತಿ – ಅಕ್ಕರೆ ತೋರುತ್ತಿರುವ ಪ್ರೀತಿಯ ಬಂಧುಗಳ ಸೇವೆಗೆ ತಾನು ಸದಾ ಬದ್ಧ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Related Articles

Back to top button