Kannada NewsKarnataka NewsLatestPolitics

*ಸಿಎಂ ಕಚೇರಿಯ ನಕಲಿ ಟಿಪ್ಪಣಿ ಸೃಷ್ಟಿಸಿ ವೈರಲ್; FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಚೇರಿಯ ನಕಲಿ ಟಿಪ್ಪಣಿ ಸೃಷ್ಟಿಸಿ ಕುಟುಂಬ ಕಲ್ಯಾಣಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲಿ ವೈರಲ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಸಿಎಂ ಕಚೇರಿಯ ನಕಲಿ ಟಿಪ್ಪಣಿ ವೈರಲ್ ಕುರಿತು ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಅಖಲಾಗಿದ್ದು, ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ. ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ.

Home add -Advt

ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್ / ಎಐ ಯುಗದಲ್ಲಿ ವಾಟ್ಸ್‌ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ.

ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

Related Articles

Back to top button