
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು, ವಿವಿಧ ಸಂಘಟನೆಗಳು ಪ್ರತಿಭಟನೆ ತೀವ್ರಗೊಳಿಸಿವೆ. ಈ ನಡುವೆ ಪ್ರತಿಭಟನೆ ವೇಳೆ ಅವಘಡವೊಂದು ಸಂಭವಿಸಿದೆ.
ರಾಜ್ಯಪಾಲರ ವಿರುದ್ಧ ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳ ಸಂಘದಿಂದ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಿದ್ದರಾಮಯ್ಯ ಅಭಿಮಾನಿಯೊಬ್ಬರಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ.
ಬಾಗಲಕೋಟೆಯ ಡಿಸಿ ಸರ್ಕಲ್ ಬಳಿ ಪ್ರತಿಭಟನಾಕಾರರು ಜಮಾವಣೆಗೊಂಡಿದ್ದರು, ರಾಜ್ಯಪಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ರಾಜ್ಯಪಲರ ಪ್ರತಿಕೃತಿ ದಹಿಸಿದ್ದಾರೆ. ರಾಜ್ಯಪಾಲರ ಪ್ರತಿಕೃತಿಗೆ ಹಚ್ಚಿದ ಬೆಂಕಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗೆ ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಿಎಂ ಅಭಿಮಾನಿಯ ಮುಖ, ಎದೆ, ಭುಜಕ್ಕೆ ಗಾಯಗಳಾಗಿದ್ದು, ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ