LatestUncategorized

*ಸಿದ್ದರಾಮಯ್ಯ ನಿವಾಸದತ್ತ ಹರಿದುಬಂದ ಅಭಿಮಾನಿಗಳು; ನಾದಸ್ವರ, ಮಂಗಳ ವಾದ್ಯದೊಂದಿಗೆ ಶುಭಾಷಯ; ಕ್ಷೀರಾಭಿಷೇಕ ಮಾಡಿ ಕುಣಿದು ಕುಪ್ಪಳಿಸಿದ ಬೆಂಬಲಿಗರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆ ಎಂದು ಅಧಿಕೃತವಾಗಿ ಘೋಷಣೆಯಾಗುತ್ತಿದ್ದಂತೆ ಬೆಂಗಳೂರಿನ ಸಿದ್ದರಾಮಯ್ಯ ನಿವಾಸದತ್ತ ಅಭಿಮಾನಿಗಳು ಸಾಗರೋಪಾದಿಯಲ್ಲಿ ಧಾವಿಸುತ್ತಿದ್ದು, ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಸಿದ್ದರಾಮಯ್ಯನವರ ಸರ್ಕಾರಿ ನಿವಾಸದ ಬಳಿ ಸಿದ್ದರಾಮಯ್ಯ ಬೆಂಬಲಿಗರು, ಅಭಿಮಾನಿಗಳು ಆಗಮಿಸಿದ್ದು, ನಾದಸ್ವರ, ಮಂಗಳವಾದ್ಯದ ಮೂಲಕ ಶುಭಕೋರಿದ್ದಾರೆ. ನೂರಾರು ಅಭಿಮಾನಿಗಳು ನಾದಸ್ವರಕ್ಕೆ ಹೆಜ್ಜೆಹಾಕಿ ಕುಣಿದು ಕುಪ್ಪಳಿಸಿದ್ದಾರೆ.

ಇನ್ನೊಂದೆಡೆ ಸಿದ್ದರಾಮಯ್ಯನವರ ಬೃಹತ್ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಜಯಘೋಷಗಳನ್ನು ಕೂಗುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ 2.0 ಎಂಬ ಬರಹವುಳ್ಳ 7 ಕೆಜಿ ತೂಕದ ಕೇಕ್ ಕಟ್ ಮಾಡಿ ಸಂಭ್ರಮಾಚರಣೆ ನಡೆಸಿದ್ದಾರೆ.

ಸಿದ್ದರಾಮಯ್ಯ ನಿವಾಸದತ್ತ ಅಭಿಮಾನಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲಿಸ್ ಭದ್ರತೆ ಕೈಗೊಳ್ಳಲಾಗಿದೆ. ನಿವಾಸದ ಸುತ್ತಲೂ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ.

Home add -Advt
https://pragati.taskdun.com/siddaramaiahcmfirst-tweet/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button