ಪ್ರಗತಿವಾಹಿನಿ ಸುದ್ದಿ: ಈ ವರ್ಷ ಜಾನುವಾರುಗಳ ಗಣತಿ ಕಾರ್ಯ ಕೈಗೊಳ್ಳಲು ಉದ್ದೇಶಿಸಲಾಗಿದೆ. ಇದನ್ನು ವೈಜ್ಞಾನಿಕವಾಗಿ ನಿರ್ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ 2.4 ಕೋಟಿ ಲೀಟರ್ ಪ್ರತಿದಿನ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದನೆ ಹೆಚ್ಚಿಸಲು ಪೂರಕವಾಗಿ ಲಸಿಕಾ ಕಾರ್ಯಕ್ರಮವನ್ನು ಸಮಗ್ರವಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.
*ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಶೇ.6ರ ಬಡ್ಡಿ ಸಹಾಯಧನ ಒದಗಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 2759 ವೈಯಕ್ತಿಕ ಫಲಾನುಭವಿಗಳಿಗೆ ರೂ.1ಕೋಟಿ ಅನುದಾನದಲ್ಲಿ ಸಹಾಯಧನ ಒದಗಿಸಲು ನಿಗದಿಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳು ಅರ್ಹ ಮಹಿಳೆಯರಿಗೆ ಸಹಾಯಧನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಜಾನುವಾರುಗಳ ಮರಣಕ್ಕೆ ಪರಿಹಾರವನ್ನು ತಕ್ಷಣ ಒದಗಿಸಬೇಕು. ಪ್ರಸ್ತುತ ಸಾಲಿನಲ್ಲಿ ಸಾವಿಗೀಡಾದ 10,800 ಜಾನುವಾರುಗಳಿಗೆ 5.83 ಕೋಟಿ ರೂ. ಪರಿಹಾರ ಒದಗಿಸಲಾಗಿದೆ. ಈ ಹಿಂದೆ ಸಾವಿಗೀಡಾದ ಜಾನುವಾರುಗಳಿಗೆ ನೀಡಬೇಕಾದ ಪರಿಹಾರ ಬಾಕಿ ಕುರಿತು ಪರಿಶೀಲನೆ ನಡೆಸಬೇಕು ಎನ್ನುವ ಸೂಚನೆಯನ್ನು ಸಿಎಂ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ