Cancer Hospital 2
Bottom Add. 3

*ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭೇಟಿ; ಕುತೂಹಲ ಮೂಡಿಸಿದ ವಿದ್ಯಮಾನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಅನಿರೀಕ್ಷಿತವಾಗಿ ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಯಿತು.

CWC ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು.

ಈ ವೇಳೆ ಮುಖ್ಯಮಂತ್ರಿಗಳು ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು.‌ ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು.

ಕೆಲ ಕಾಲ ಕುಶಲೋಪರಿ, ಮಾತುಕತೆ ಬಳಿಕ ಪರಸ್ಪರರು ಬೀಳ್ಕೊಟ್ಟರು. ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.


Bottom Add3
Bottom Ad 2

You cannot copy content of this page