ಗಲಭೆ ಪೊಲೀಸರ ಸೃಷ್ಟಿ ಎಂದು ನಾನು ಈ ಹಿಂದೆಯೇ ಹೇಳಿದ್ದೆ ಎಂದ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಮಂಗಳೂರು ಗಲಭೆ ಹಾಗೂ ಗೋಲಿಬಾರ್ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಡುಗಡೆ ಮಾಡಿದ್ದ ವಿಡಿಯೋ ಅವರದ್ದೇ ಸೃಷ್ಟಿ ಎಂದು ನಾನು ಈ ಮೊದಲೇ ಹೇಳಿದ್ದೆ. ಅವರ ತಪ್ಪು ಮುಚ್ಚಿಕೊಳ್ಳಲು ವಿಡಿಯೋ ಸೃಷ್ಟಿ ಮಾಡಿದ್ದರು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಗಳೂರು ಗಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ 35 ದೃಶ್ಯಗಳ ವಿಡಿಯೋ ಕುರಿತು ಪ್ರತಿಕ್ರಿಯಿಸಿದ ಸಿದ್ದಾರಾಮಯ್ಯ, ಮಂಗಳೂರಿನಲ್ಲಿ ಹಿಂಸಾಚಾರ ಸೃಷ್ಟಿಸಿ ಪೊಲೀಸನವರು ತಪ್ಪು ಮಾಡಿದ್ದಾರೆ. ತಾವು ಮಾಡಿದ್ದ ತಪ್ಪನ್ನು ಮುಚ್ಚಿಕೊಳ್ಳಲು ಪೊಲೀಸಿರೇ ವಿಡಿಯೋ ಮಾಡಿದ್ದರು ಎಂದರು.

ನಾನು ಈ ಬಗ್ಗೆ ಮೊದಲೇ ಹೇಳಿದ್ದೆ. ಪೊಲೀಸರೇ ದೌರ್ಜ್ಯನ್ಯಗಳನ್ನು ನಡೆಸಿ, ಗಲಭೆ, ಹಿಂಸಾಚಾರ ಹೆಸರಲ್ಲಿ ಅಮಾಯಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಘಟನೆಯಲ್ಲಿ ಯಾವುದೇ ಅಂಗಡಿ ಮುಂಗಟ್ಟುಗಳಿಗೆ ಹಾನಿಯಾಗಿಲ್ಲ. ಪೊಲೀಸರೇ ವ್ಯವಸ್ಥಿವಾಗಿ ನಡೆಸಿದ್ದ ಗಲಭೆಯಿದು ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ನೆರೆ, ಮಳೆ ಹಾನಿ,ರಸ್ತೆ ದುರಸ್ಥಿಗಾಗಿ ಶಾಸಕರಿಗೆ ನೀಡಬೇಕಾಗಿದ್ದ ಅನುದಾನವನ್ನು ಬಿಜೆಪಿ ಮುಖಂಡರಿಗೆ ಬಿಡುಗಡೆ ಮಾಡಲಾಗಿದೆ. ಈ ರೀತಿ ಮಾಡುವುದು ಸರಿಯಲ್ಲ. ಈ ವರೆಗೂ ನೆರೆ ಸಂತ್ರಸ್ತರಿಗೆ ಅನುದಾನ ಬಿಡುಗಡೆ ಮಾಡದ ಯಡಿಯೂರಪ್ಪನವರಿಗೆ ಬಾಯಿಗೆ ಬಂದಂತೆ ಬಯ್ಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button