GIT add 2024-1
Kore@40
Beereshwara 33

*ಮೋದಿ ಕೊಟ್ಟ ‘ಖಾಲಿ ಚೊಂಬ’ನ್ನು ‘ಅಕ್ಷಯ ಪಾತ್ರೆ’ ಎಂದು ಕರೆಯಬೇಕೆ? ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ*

Anvekar 3
Cancer Hospital 2

ಮೋದಿ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ರೈತರ ಸಾಲ ಏಕೆ ಮನ್ನಾ ಮಾಡಿಲ್ಲ? ರೈತರ ಬೆಳೆಗಳಿಗೆ ಏಕೆ ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ?

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿದ್ದಾರೆ. ರಾಜ್ಯದ ಜನತೆಗೆ ಅನ್ಯಾಯ ಮಾಡಿದ್ದಾರೆ. ಖಾಲಿ ಚೊಂಬು ಕೊಟ್ಟಿದ್ದೇ ಮೋದಿ ಸಾಧನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕೋಲಾರದ ಬಂಗಾರಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಚುನಾವಣಾ ಪ್ರಚಾರ ನಡೆಸಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ಕರ್ನಾಟಕ್ಕೆ ಖಾಲಿ ಚೊಂಬು ಕೊಟ್ಟು, ಮತ ಕೇಳಲು ಬಂದಿದ್ದಾರೆ ಎಂದು ಕಿಡಿಕಾರಿದರು.

ಮೋದಿ ಪ್ರಧಾನಿಯಾದ ಮೇಲೆ ದೇಶದ ಸಾಲ 124 ಲಕ್ಷ ಕೋಟಿಯಾಗಿದೆ. ದೇಶದ ಜನತೆಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಾಲ ನೀಡಿ ಚೊಂಬು ನೀಡಿದ್ದನ್ನು ದೇವೇಗೌಡರು ಮೋದಿ ಹೊಗಳಬೇಕು ಎಂಬ ಒಂದೇ ಕಾರಣಕ್ಕೆ ಮೋದಿ ಅಕ್ಷಯ ಪಾತ್ರೆ ನೀಡಿದ್ದಾರೆ ಎನ್ನುತ್ತಿದ್ದಾರೆ. 124 ಲಕ್ಷ ಕೋಟಿ ಸಾಲವನ್ನು ಅಕ್ಷಯ ಪಾತ್ರೆ ಎನ್ನಬೇಕೆ? ಕರ್ನಾಟಕಕ್ಕೆ ಮಾಡಿರುವ ಅನ್ಯಾಯ ನಿಮಗೆ ಕಾಣುತ್ತಿಲ್ಲವೇ? ಎಂದು ಪ್ರಶ್ನಿಸಿದರು. ಮಾಜಿ ಪ್ರಧಾನಿಯಾಗಿ ದೇವೇಗೌದರೇ ಜನರಿಗೆ ಯಾಕಿಷ್ಟು ಸುಳ್ಳು ಹೇಳುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ ಎಂದು ಸಿಎಂ ಪ್ರಶ್ನಿಸಿದರು

Emergency Service

ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ರಾಜ್ಯದ ರೈತರ ಸಾಲ ಏಕೆ ಮನ್ನಾ ಮಾಡುತ್ತಿಲ್ಲ? ಮೋದಿಯವರೇಕೆ ರಾಜ್ಯದ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ? ಎಂದು ಕೇಳಿದ್ದಾರೆ.

ಮೋದಿಯವರ ಚೊಂಬು ಅತ್ಯಂತ ಶ್ರೀಮಂತರ, ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಇದು ಅತೀ ಶ್ರೀಮಂತರ ಅಕ್ಷಯ ಪಾತ್ರೆ. ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು ಅಷ್ಟೆ ಅಲ್ವಾ ದೇವೇಗೌಡರೇ?

ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಮಾಡಿದ ಮೋಸವನ್ನು ಮೋದಿಯವರ ಖಾಲಿ ಚೊಂಬು ಸಾಕ್ಷಿಯಾಗಿದೆ. ದೇವೇಗೌಡರೇ ಈ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಾಗಿದ್ದರೆ 15 ನೇ ಹಣಕಾಸು ಆಯೋಗದಲ್ಲಿ‌ ಆಗಿರುವ ನಷ್ಟ, ಅನ್ಯಾಯವನ್ನು ತುಂಬಿ ಕೊಡಿಸಿ. ಅಕ್ಷಯ ಪಾತ್ರೆಯಿಂದ ಉದುರಿಸಿ ನೋಡೋಣ ಎಂದು ಸವಾಲು ಹಾಕಿದರು

ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು, ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುವುದಾಗಿ ಘೋಷಿಸಿದ್ದ ದೇವೇಗೌಡರು ಈಗ ಮೋದಿ ಮತ್ತು ತಾವು ಭಾಯಿ ಭಾಯಿ ಎನ್ನುತ್ತಿದ್ದಾರೆ. ಈಗ ಇದೇ ದೇವೇಗೌಡರು ಮೋದಿಯವರ ಖಾಲಿ ಚೊಂಬನ್ನು ಅಕ್ಷಯ ಪಾತ್ರೆ ಎನ್ನುತ್ತಿದ್ದಾರೆ. ಆದ್ದರಿಂದ ಕೋಲಾರದಲ್ಲಿ ದೇವೇಗೌಡರು ಮತ್ತು ಮೋದಿಯವರ ಖಾಲಿ ಚೊಂಬನ್ನು ಸೋಲಿಸಿ ನಮ್ಮ ಗ್ಯಾರಂಟಿಗಳಿಗೆ ಆಶೀರ್ವದಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸಿ ಎಂದು ಸಿ.ಎಂ ಕರೆ ನೀಡಿದರು

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೌತಮ್ ಗೆಲುವು ನಿಶ್ಚಿತವಾಗಿದೆ. ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಬಹುಮತ ನೀಡಿ ಶಾಸಕ ನಾರಾಯಣಸ್ವಾಮಿಯವರಿಗೆ ಹೆಚ್ಚಿನ ಶಕ್ತಿ ನೀಡಿ ಎಂದು ಮನವಿ ಮಾಡಿದರು.

Laxmi Tai add
Bottom Add3
Bottom Ad 2