ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ದೊರೆಸ್ವಾಮಿ ಜೈಲುವಾಸ ಅನುಭವಿಸಿದ್ದರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೆಚ್.ಎಸ್. ದೊರೆಸ್ವಾಮಿ ಅವರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ 14 ತಿಂಗಳು ಜೈಲುವಾಸ ಅನುಭವಿಸಿದ್ದಕ್ಕೆ ದಾಖಲೆ ಇದೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲೂ ಅವರು ಅಂದಿನ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸದನದ ಕಲಾಪದ ನಂತರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಮತ್ತು ಯತ್ನಾಳ್ ವಿರುದ್ಧ ಕಿಡಿಕಾರಿದರು. ದೊರೆಸ್ವಾಮಿಯವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಅವರು ಆಡಳಿತರೂಢ ಸರ್ಕಾರದ ವಿರುದ್ಧ ಅನೇಕ ಗಮನಾರ್ಹ ಪ್ರತಿಭಟನೆಗಳನ್ನು ಹೋರಾಟಗಳನ್ನು ನಡೆಸಿದ್ದರು. ದಲಿತರು ಹಿಂದುಳಿದವರಿಗಾಗಿ ನಿರಂತರ ಹೋರಾಟ ನಡೆಸಿದ್ದಾರೆ. ಅಂತಹ ವ್ಯಕ್ತಿಯ ಬಗ್ಗೆ ಶಾಸಕ ಯತ್ನಾಳ್ ದೊರೆಸ್ವಾಮಿ ಪಾಕ್ ಏಜೆಂಟ್, ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಕೀಳು ಮಟ್ಟದ ಹೇಳಿಕೆ ನೀಡಿರುವುದು ಸರಿಯಲ್ಲ. ಆದರೆ, ಈ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ಕೇಳಿದ್ರೆ ಸ್ಪೀಕರ್ ಕಾನೂನು ಸಚಿವರನ್ನು ಕೇಳಬೇಕು ಎನ್ನುವ ಮೂಲಕ ಸದನವನ್ನು ತಪ್ಪು ದಾರಿಗೆ ಎಳೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದು ಸದನಕ್ಕೆ ಮಾಡಿ ಅಗೌರವ. ಹೀಗಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ವಿಶೇಷ ಅಧಿಕಾರವನ್ನು ಬಳಸಿ ಕೂಡಲೇ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button