Cancer Hospital 2
Bottom Add. 3

*ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಹಾಸನ: ಅಧಿಕಾರಿಗಳು ಮತ್ತು ನಾವು ಜನರ ಸೇವಕರು. ಜನರೇ ನಮ್ಮ ಮಾಲೀಕರು. ಜನರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತೋರಿಸಿದರೆ ಸಹಿಸಲ್ಲ. ಅರ್ಜಿ ಸ್ವೀಕರಿಸಿದರೆ ಸ್ವೀಕೃತಿ ಪತ್ರ ಕಡ್ಡಾಯವಾಗಿ ನೀಡಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ಹಾಸನ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಣ್ಣ ಪುಟ್ಟ ಸಮಸ್ಯೆಗಳಿಗಾಗಿ ನಮ್ಮ ಜನರು ಬೆಂಗಳೂರಿನವರೆಗೂ ನನ್ನನ್ನು ಹುಡುಕಿಕೊಂಡು ಬರಬೇಕಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ರೈತರು ಮತ್ತು ಶ್ರಮಿಕರ ಸಮಸ್ಯೆಗಳು ಬಹುತೇಕ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲೇ ಬಗೆಹರಿಸಿ. ಜನರು ಬೆಂಗಳೂರಿನವರೆಗೂ ಅಲೆಯಬಾರದು. ಅನಗತ್ಯ ಸತಾಯಿಸುವ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಯಾವುದೇ ಪ್ರಭಾವಕ್ಕೂ ಮಣಿಯುವುದಿಲ್ಲ. ಕಠಿಣ ಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದರು.

ಜನರ ಮನೆ ಬಾಗಿಲಿಗೆ ಸರ್ಕಾರವನ್ನು ತಲುಪಿಸಬೇಕು. ಜನರನ್ನು ಸರ್ಕಾರಿ ಕಚೇರಿಗೆ ಅಲೆದಾಡಿಸುವುದು ಭ್ರಷ್ಟಾಚಾರ. ಇದನ್ನು ಯಾವ ಅಧಿಕಾರಿ ಮಾಡಿದರೂ ಸಹಿಸಲ್ಲ. ಜನರಿಗೆ ನಿಮ್ಮ ಅನುಕಂಪ ಬೇಕಾಗಿಲ್ಲ. ನಿಮ್ಮ ಜವಾಬ್ದಾರಿಯನ್ನು ನೀವು ಸಮರ್ಪಕವಾಗಿ ನಿರ್ವಹಿಸಿದರೆ ಸಾಕು. ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಿ. ನಮ್ಮ ಸರ್ಕಾರ ಎಲ್ಲಾ ವರ್ಗ, ಎಲ್ಲಾ ಜಾತಿ, ಎಲ್ಲಾ ಧರ್ಮಗಳಿಗೂ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಯ ಸಾಧನೆ ಶೇ100 ರಷ್ಟು ಸಾಧಿಸಬೇಕು. ಆದರೆ ಹಾಸನ ಜಿಲ್ಲೆಯಲ್ಲಿ ಇನ್ನೂ ಶೇ90 ರಷ್ಟಕ್ಕೆ ನಿಂತಿದೆ. ಇದನ್ನು ಶೇ 100 ರಷ್ಟು ಪೂರೈಸಿ. ನೋಂದಣಿ ಮಾಡಿಸಿರುವ ಪ್ರತಿಯೊಬ್ಬರಿಗೂ ಗ್ಯಾರಂಟಿ ಸ್ಕೀಂಗಳು ತಲುಪಬೇಕು ಎನ್ನುವ ಸೂಚನೆ ನೀಡಿದರು.

ಹಾಸನ, ಅರಸೀಕರೆ, ಅರಕಲಗೂಡು ತಾಲ್ಲೂಕುಗಳಲ್ಲಿ ಗ್ಯಾರಂಟಿ ಯೋಜನೆಗಳು ಶೇ 90 ರಷ್ಟನ್ನೂ ತಲುಪಿಲ್ಲ ಏಕೆ? ಎಂದು ಗರಂ ಆಗಿ ಪ್ರಶ್ನಿಸಿದರು.

Bottom Add3
Bottom Ad 2

You cannot copy content of this page