ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ತಡರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಕೊರೋನಾ ಟೆಸ್ಟ್ ನಡೆಸಲಾಗಿದ್ದು ಕೊರೋನಾ ಪಾಸಿಟಿವ್ ಬಂದಿದೆ.
ಪುತ್ರ ಯತೀಂದ್ರ ಈ ಕುರಿತು ಟ್ವೀಟ್ ಮಾಡಿದ್ದಾರೆ. ಸಂಪರ್ಕಕ್ಕೆ ಬಂದವರೆಲ್ಲ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
15 ದಿನಗಳ ಹಿಂದೆ ಅವರಿಗೆ ಮೂತ್ರಕೋಶ ಸೋಂಕು ಕಾಣಿಸಿಕೊಂಡಿತ್ತು. ಮನೆಯಲ್ಲೇ ಮನೆಮದ್ದಾಗಿ ದಿನಕ್ಕೆ ಮೂರು ಬಾರಿ ಬಾರ್ಲಿ ಗಂಜಿ ಕುಡಿಯುತ್ತಿದ್ದರು. ಆದರೆ, ನಿನ್ನೆ ರಾತ್ರಿ ಅವರಿಗೆ ಮತ್ತೆ ನೋವು ಕಾಣಿಸಿಕೊಂಡಿದೆ. ಮಗ ಡಾ. ಯತೀಂದ್ರ ಅವರ ಸೂಚನೆ ಮೇರೆಗೆ ಸಿದ್ದರಾಮಯ್ಯ ಅವರನ್ನು ರಾತ್ರಿ 3:30ರ ಸುಮಾರಿಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಂತರ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ ಕೋವಿಡ್-19 ಪರೀಕ್ಷೆಗಾಗಿ ಸ್ಯಾಂಪಲ್ ಪಡೆಯಲಾಗಿದೆ. ಕೋವಿಡ್ ವರದಿ ಬಂದಿದ್ದು, ಕೊರೋನಾ ಸೋಂಕು ದೃಢಪಟ್ಟಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ