Kannada NewsKarnataka NewsLatestPolitics
*ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಂಡುಬಂದ ಘಟನೆ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತುಮಕೂರಿಗೆ ತೆರಳಲು ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಹೆಚ್ ಎ ಎಲ್ ನಿಂದ ತುಮಕೂರಿಗೆ ವಿಶೇಷ ವಿಮಾನದಲ್ಲಿ ತೆರಳಬೇಕಾಗಿತ್ತು. ಆದರೆ ಸಿಎಂ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಹೆಲಿಕಾಪ್ಟರ್ ಟೇಕಾಫ್ ಆಗಿಲ್ಲ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಸ್ತೆ ಮಾರ್ಗವಾಗಿಯೇ ತುಮಕೂರಿಗೆ ತೆರಳಿದ್ದಾರೆ. ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕರ್ನಾಟಕ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.



