
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದೆ.
ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಜಾಗೊಳಿಸಿದ ರಾಜ್ಯ ಹೈಕೋರ್ಟ್, ಸಿಎಂ ಸಿದ್ದರಾಮಯ್ಯನವರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿದೆ.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಖಂಡಿಸಿ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ 2022ರ ಏಪ್ರಿಲ್ 14ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಅಂದಿನ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಇದರಿಂದ ರಸ್ತೆ ತಡೆ ಉಂಟಾಗಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ನಿಂದ ಸಾರ್ವಜನಿಕರು ಪರದಾಡಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ