
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ವಿಶ್ರಾಂತಿಗಾಗಿ ತಮ್ಮ ನಿವಾಸಕ್ಕೆ ತೆರಳಿದ್ದಾರೆ.
ಗಂಟಲು ನೋವಿನಿಂದ ಸಿಎಂ ಸಿದ್ದರಾಮಯ್ಯ ಬಳಲುತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದಿಂದ ಮನೆಗೆ ತೆರಳಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ.
ಬಜೆಟ್ ಮಂಡನೆ ಬಳಿಕ ಸಿಎಂ ಸಿದ್ದರಾಮಯ್ಯ ಎರಡು ದಿನ ನಿರಂತರವಾಗಿ ಜಿಲ್ಲಾ ಪ್ರವಾಸದಲ್ಲಿದ್ದರು. ಹಾಗಾಗಿ ಸಣ್ಣಪ್ರಮಾಣದಲ್ಲಿ ಅನಾರೋಗ್ಯ ಉಂಟಾಗಿದೆ. ಹಾಗಾಅಗಿ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿರುವ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನದ ಬಳಿಕ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ