Kannada NewsKarnataka NewsLatestPolitics

*ಐಪಿಎಸ್ ಅಧಿಕಾರಿ ರಾಸಲೀಲೆ ಪ್ರಕರಣ: ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಹಿರಿಯ ಐಪಿಎಸ್ ಅಧಿಕಾರಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ ಅವರು ಕಚೇರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್​​ ಆಗಿದ್ದು, ಈ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ.

ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡಿರುವ ವಿಡಿಯೋ ಈಗ ವೈರಲ್‌ ಆಗಿದ್ದು, ಇದು 1 ವರ್ಷದ ಹಿಂದೆ ಸೆರೆಯಾಗಿದ್ದ ವಿಡಿಯೋ ಎನ್ನಲಾಗಿದೆ.

ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ವಿಡಿಯೋ ಬಗ್ಗೆ ನನಗೆ ಬೆಳಗ್ಗೆಯಷ್ಟೇ ಗೊತ್ತಾಗಿದೆ. ಎಷ್ಟೇ ದೊಡ್ಡವರಾದ್ರು ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚಿಸಿದ್ದೇನೆ ಎಂದರು.

Home add -Advt

Related Articles

Back to top button