ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಕಾಂಗ್ರೆಸ್ ಪಕ್ಷಕ್ಕೆ ಸಿದ್ಧಾಂತಗಳಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಬಿಜೆಪಿಯವರಿಗೆ ಯಾವ ಸಿದ್ಧಗಳಿದೆ ಎಂದು ಪ್ರಶ್ನಿಸಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಅಬ್ಬಕ್ಕ ವರ್ಸಸ್ ಟಿಪ್ಪು ಚರ್ಚೆ ಆಗಲಿದೆ ಎಂದು ಅಮಿತ್ ಶಾ ಹೇಳಿದ್ದು ಸಿದ್ಧಾಂತವೇ? ಗಾಂಧಿ ವರ್ಸಸ್ ಸಾವರ್ಕರ್ ಎಂದು ಹೇಳಿರುವುದು ಸಿದ್ಧಾಂತವೇ? ಸಿದ್ದರಾಮಯ್ಯ ಅವರನ್ನು ಮುಗಿಸಿ ಎಂದು ಹೇಳಿರುವುದು ಸಿದ್ಧಾಂತವೇ? ಬಿಜೆಪಿಯವರಿಗೆ ಯಾವ ಸಿದ್ಧಾಂತವಿದೆ? ಎಂದು ಕೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ರಾಜಕೀಯ ಜ್ಞಾನ ಇಲ್ಲ ಎಂದು ಹೇಳುತ್ತಿದ್ದೆ. ಆದರೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ರಾಜಕೀಯ ಜ್ಞಾನ ಇಲ್ಲ ಎಂದು ಗೊತ್ತಾಗಿದೆ. ಪ್ರಧಾನಿ ಮೋದಿ, ನಡ್ಡಾ, ಅಮಿತ್ ಶಾ 100 ಬಾರಿ ರಾಜ್ಯಕ್ಕೆ ಬಂದರೂ ಯಾವುದೇ ಪ್ರಯೋಜನ ಆಗಲ್ಲ. ರಾಜ್ಯದ ಜನರು ಬಿಜೆಪಿ ಸೋಲಿಸಲು ತೀರ್ಮಾನಿಸಿದ್ದಾರೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಇದೇ ವೇಳೆ ಸಿ.ಟಿ.ರವಿ ಮಾಂಸಾಹಾರ ಸೇವಿಸಿ ದೇವಾಲಯಗಳಿಗೆ ಭೇಟಿ ವಿಚಾರವಾಗಿ ನಾನು ಈ ಬಗ್ಗೆ ಮಾತನಾಡಲ್ಲ, ಇದು ಚರ್ಚೆ ಮಾಡಬೇಕಾದ ವಿಷಯವೇ ಅಲ್ಲ. ಅಭಿವೃದ್ಧಿ ವಿಚಾರ ಮಾತನಾಡುವುದನ್ನು ಬಿಟ್ಟು ಬೇರೆ ಕೆಲಸ ಮಾಡುತ್ತಿದ್ದಾರೆ ಬಿಜೆಪಿಯವರು. ಟಿಪ್ಪು, ಅಬ್ಬಕ್ಕ, ಗಾಂಧಿ ಬಗ್ಗೆ ಹೇಳಿಕೆ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
*ವಿದಾಯದ ಭಾಷಣ…ವಿಧಾನಸಭೆಯಲ್ಲಿ ಭಾವುಕರಾದ ಮಾಜಿ ಸಿಎಂ ಯಡಿಯೂರಪ್ಪ*
https://pragati.taskdun.com/b-s-yedyurappavidhanasabhe-last-speech/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ